ಚಿಕ್ಕಮಗಳೂರು: ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ ಈ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರೀಶ್ ಪಾಂಡೆ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಶಾಸಕ ಯು.ಟಿ.ಖಾದರ್, ಪೌರತ್ವ ಕಾಯ್ದೆ ರಾಜ್ಯದಲ್ಲಿ ಜಾರಿಯಾದರೆ ಇಡೀ ರಾಜ್ಯವೆ ಹೊತ್ತಿ ಉರಿಯಲಿದೆ ಎಂದು ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಈ ಮೂಲಕ ಮಂಗಳೂರಿನಲ್ಲಿ ಇಬ್ಬರ ಸಾವಿಗೆ ಕಾರಣರಾಗಿದ್ದಾರೆ. ಖಾದರ್ ಅವರು ಉದ್ದೇಶ ಪೂರ್ವಕವಾಗಿ ಈ ಹೇಳಿಕೆ ನೀಡಿದ್ದು, ಅವರ ವಿರುದ್ದ ಐಪಿಸಿ ಸೆಕ್ಷನ್ 123ಎ, 153ಎ,153 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧಿಸಬೇಕು ಎಂದು ಆಗ್ರಹಿಸಿದರು.