ಚಿಕ್ಕಮಗಳೂರು: ಕಡೂರು ತಾಲೂಕಿನ ಎಮ್ಮೆದೊಡ್ಡಿ ಗ್ರಾಮದಲ್ಲಿ ಜಮೀನು ಸ್ವಾಧೀನ ಪಡಿಸಿಕೊಳ್ಳಲು ವಾಮಾಚಾರ ಮಾಡಿರುವ ಶಂಕೆ ವ್ಯಕ್ತವಾಗಿದೆ.
ವಾಸುದೇವಿ ಶೆಟ್ಟಿ ಎನ್ನುವರಿಗೆ ಸೇರಿದ ಜಮೀನಲ್ಲಿ ವಾಮಾಚಾರ ಮಾಡಲಾಗಿದೆ. ಜಮೀನು ಮಾರಾಟ ಮಾಡಲಿ ಎಂದು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಕಿಡಿಗೇಡಿಗಳ ಕೃತ್ಯದಿಂದ ಭೂಮಿ ಮಾಲೀಕ ವಾಸುದೇವಿ ಶೆಟ್ಟಿ ಆತಂಕಕ್ಕೆ ಒಳಗಾಗಿದ್ದಾರೆ.