ಚಿಕ್ಕಮಗಳೂರು: ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.
ದೇಶಾದ್ಯಂತ ನಡೆಯುತ್ತಿರುವ ಸೇವಾ ಸಪ್ತಾಹ ಅಭಿಯಾನ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಹುಟ್ಟುಹಬ್ಬದ ಹಿನ್ನೆಲೆ, ಬಿಜೆಪಿ ನಗರ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.
ಪ್ರಧಾನಿ ಮೋದಿ ಅವರಿಗೆ 70 ವರ್ಷ ತುಂಬಿದ ಹಿನ್ನೆಲೆ 70 ಜನ ಬಿಜೆಪಿ ಕಾರ್ಯಕರ್ತರು ರಕ್ತದಾನ ಮಾಡಿ ಈ ಸಪ್ತಾಹದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.