ಚಿಕ್ಕಮಗಳೂರು: ಮನೆಯ ಮುಂಭಾಗ ಆಟವಾಡುತ್ತಿದ್ದ ಬಾಲಕನ ಮೇಲೆ ಲಾರಿ ಹರಿದು ಆತ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಗ್ರಾಮದಲ್ಲಿ ಈ ದುರಂತ ನಡೆದಿದ್ದು, ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ಬಾಲಕ ಸುರೇಶ್ (10) ಮೇಲೆ ಲಾರಿ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಲಾರಿ ನುಗ್ಗಿದ ರಭಸಕ್ಕೆ ಕಾಫಿ ತೋಟದ ಲೈನ್ ಮನೆಯ ಅರ್ಧಭಾಗ ಸಂಪೂರ್ಣ ಜಖಂ ಆಗಿದೆ.

ಮಂಜುನಾಥಗೌಡ ಎಂಬುವರ ಲೈನ್ ಮನೆಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು, ಚಿಕ್ಕಮಗಳೂರಿನಿಂದ ಕುಂದಾಪುರ ಮಾರ್ಗವಾಗಿ ಹೋಗುತ್ತಿದ್ದ ತರಕಾರಿ ಲಾರಿಯಿಂದ ಈ ಅವಘಡ ನಡೆದಿದೆ.

ಬಾಳೆಹೊನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.