ಚಿಕ್ಕಮಗಳೂರು: ಬೈಕ್ ಸಂಚರಿಸುತ್ತಿದ್ದಾಗಲೇ ಸೇತುವೆ ಕುಸಿದು ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮಾಲಿಂಗನಾಡು ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಧಾರಾಕಾರ ಮಳೆ ಹಿನ್ನೆಲೆ ಹಿರೇಬೈಲು-ಕೂವೆ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ಸುಮಾರು 40-50 ಅಡಿ ಆಳಕ್ಕೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಬೈಕ್ ಸವಾರ ಪ್ರದೀಪ್ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಲೆನಾಡ ರಣ ಮಳೆಗೆ ಜನ ಹೈರಾಣರಾಗಿದ್ದು, ನಿನ್ನೆ ಸಂಜೆ ಸುರಿದ ಮಳೆಗೆ ಜನ ಕಂಗಾಲಾಗಿದ್ದಾರೆ.