ಚಿಕ್ಕಮಗಳೂರು: ಎರಡು ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ರಜೆ ಇರುವ ಹಿನ್ನೆಲೆ, ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದು, ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್‌ನಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ.
ನಿನ್ನೆ ಮತ್ತು ಇವತ್ತು ಶಾಲಾ ಕಾಲೇಜುಗಳಿಗೆ ರಜೆ ಇರುವ ಕಾರಣ, ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಸಾವಿರಾರೂ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು ನಗರ ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಜಿಲ್ಲೆಯ ಕೈಮರ ಚೆಕ್ಪೋಸ್ಟ್ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ನೂರಾರು ಸಂಖ್ಯೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಮುಳ್ಳಯ್ಯನಗಿರಿ, ಕವಿಕಲ್ ಗಂಡಿ, ಹೊನ್ನಮ್ಮನ ಹಳ್ಳ, ದತ್ತಪೀಠದ ಮಾರ್ಗದಲ್ಲಿ ಸುಮಾರು ಒಂದು ಕಿ.ಮೀನಷ್ಟು ದೂರ ವಾಹನಗಳು ನಿಂತಲ್ಲೇ ನಿಂತುಕೊಂಡಿವೆ. ಟ್ರಾಫಿಕ್ ಜಾಮ್ ನಿಂದ ಪ್ರವಾಸಿಗರು ಹೈರಾಣಾಗಿದ್ದು, ಸ್ಥಳೀಯರು ಕೂಡ ಪರದಾಡುವಂತಹ ಪರಿಸ್ಥಿತಿ ಉಂಟಾಗಿದೆ.
ಇದರ ಜೊತೆಗೆ ಧಾರಾಕಾರ ಮಳೆಯೂ ಸುರಿಯುತ್ತಿದೆ. ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರ ಹರಸಾಹಸಪಡುತ್ತಿದ್ದಾರೆ.