ಚಿಕ್ಕಮಗಳೂರು: ಕೊರೊನಾ ಭೀತಿ ಹಿನ್ನೆಲೆ ಸಂಪೂರ್ಣ ಜಿಲ್ಲೆಯನ್ನು ಬಂದ್ ಮಾಡಲಾಗಿದ್ದು, ಅಗತ್ಯ ವಸ್ತುಗಳನ್ನು ಖರೀದಿಸಲು ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕೊರೊನಾ ವೈರಸ್ ಹರಡುವುದನ್ನು ತಡೆಯಲು ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸರು ಸಾರ್ವಜನಿಕರಿಗೆ ಅನುಕೂಲವಾಗಲು ಹೊಸ ಸಾಹಸಕ್ಕೆ ಕೈಹಾಕಿದ್ದಾರೆ.
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಸುತ್ತಮುತ್ತ ಹಳ್ಳಿಗಳಲ್ಲಿ ಪೊಲೀಸರೇ ತರಕಾರಿ ಮತ್ತು ದಿನಸಿಗಳನ್ನು ಖರೀದಿ ಮಾಡಿ ಸಾರ್ವಜನಿಕರಿಗೆ ವಿತರಿಸುತ್ತಿದ್ದಾರೆ. ಇದರ ಅನುಕೂಲವನ್ನು ಮನೆಯ ಬಾಗಿಲಿನಲ್ಲೇ ಸಾರ್ವಜನಿಕರು ಪಡೆದುಕೊಳ್ಳುತ್ತಿದ್ದಾರೆ.
ಯಾವುದೇ ಕಾರಣಕ್ಕೂ ಮನೆಯಿಂದ ನೀವು ಹೊರ ಬರಬೇಡಿ. ನಿಮಗೆ ಏನೇ ವಸ್ತುಗಳು ಬೇಕಾದರೂ ನಮಗೆ ಹೇಳಿ. ಅವುಗಳನ್ನು ತಂದು ಕೊಡುತ್ತೇವೆ ಎಂದು ಸಾರ್ವಜನಿಕರಿಗೆ ಪೊಲೀಸರು ಕೇಳಿಕೊಂಡಿದ್ದಾರೆ.