ETV Bharat / state

ಮನೆ ಮನೆಗೆ ತೆರಳಿ ಭಿಕ್ಷಾಟನೆ ಮಾಡಿದ ಶಾಸಕ ಸಿ ಟಿ ರವಿ - ETV Bharath Kannada

ನಾಳೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಜಯಂತಿ ಇರುವ ಹಿನ್ನೆಲೆಯಲ್ಲಿ ಇರುಮುಡಿಗೆ ಪಡಿ ಸಂಗ್ರಹಕ್ಕಾಗಿ ಚಿಕ್ಕಮಗಳೂರು ನಗರದಲ್ಲಿ ಶಾಸಕ ಸಿ ಟಿ ರವಿ ಭಿಕ್ಷಾಟನೆ ಮಾಡಿದ್ದಾರೆ.

c-t-ravi-begging-for-irumudi-in-chikkamagalore
ಶಾಸಕ ಸಿಟಿ ರವಿ
author img

By

Published : Dec 7, 2022, 12:17 PM IST

ಚಿಕ್ಕಮಗಳೂರು: ದತ್ತಜಯಂತಿ ಹಿನ್ನೆಲೆ ಮನೆ ಮನೆಗೆ ತೆರಳಿ, ಚಿಕ್ಕಮಗಳೂರು ನಗರದಲ್ಲಿ ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಭಿಕ್ಷಾಟನೆ ನಡೆಸಿದ್ದಾರೆ. ನಗರದ ನಾರಾಯಣಪುರ, ರಾಘವೇಂದ್ರ ಮಠದ ರಸ್ತೆ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಭಿಕ್ಷಾಟನೆ ಮಾಡಿದ್ದಾರೆ.

ಭಿಕ್ಷಾಟನೆ ಮೂಲಕ ಮಾಲಾಧಾರಿಗಳಿಂದ ಪಡಿ ಸಂಗ್ರಹ ಮಾಡುತ್ತಿದ್ದಾರೆ. ಬೇಡಿಕೊಂಡು ಬಂದವರಿಗೆ ಸ್ಥಳೀಯರು ತೆಂಗಿನಕಾಯಿ, ಬಾಳೆಹಣ್ಣು, ಅಕ್ಕಿ, ವಿಳ್ಯೆದೆಲೆ ಅಡಿಕೆ -ಬೆಲ್ಲವನ್ನು ನೀಡುತ್ತಿದ್ದಾರೆ. ನಾಳೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಜಯಂತಿ ಅದ್ಧೂರಿಯಾಗಿ ನಡೆಯಲಿದ್ದು, ಇಂದು ಸಂಗ್ರಹವಾದ ಪಡಿಯನ್ನು ಗುರುವಾರ ಇರುಮುಡಿ ರೂಪದಲ್ಲಿ ದತ್ತಾತ್ರೇಯ ಸ್ವಾಮಿಗೆ ಅರ್ಪಣೆ ಮಾಡಲಾಗುತ್ತದೆ.

ಮನೆ ಮನೆಗೆ ತೆರಳಿ ಭಿಕ್ಷಾಟನೆ ಮಾಡಿದ ಶಾಸಕ ಸಿಟಿ ರವಿ

ಇಂದು ಮಧ್ಯಾಹ್ನ ನಗರದಲ್ಲಿ 30 ಸಾವಿರ ಭಕ್ತರಿಂದ ಬೃಹತ್ ಶೋಭಾಯಾತ್ರೆ ನಡೆಯಲಿದ್ದು, ಜಿಲ್ಲೆಯಾದ್ಯಂತ ಖಾಕಿ ಪಡೆ ಹೈ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: ದತ್ತ ಜಯಂತಿ ಉತ್ಸವಕ್ಕೆ ಅಡ್ಡಿ: ಕಿಡಿಗೇಡಿಗಳ ವಿರುದ್ಧ ಸಿ ಟಿ ರವಿ ಆಕ್ರೋಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.