ಚಿಕ್ಕಮಗಳೂರು: ಎಂಇಎಸ್ ಪುಂಡಾಟಿಕೆ ಹಿಂದೆ ಕಾಂಗ್ರೆಸ್ ಇದೆ. ಸಂಘರ್ಷ ಉಂಟು ಮಾಡಿ ರಾಜಕೀಯ ದುರ್ಲಾಭ ಪಡೆಯುವ ಷಡ್ಯಂತ್ರ ನಡೆಸಿದ್ದಾರೆ. ಡಿ ಕೆ ಶಿವಕುಮಾರ್ ಅವರೇ ಈ ಪ್ರಕರಣದ ಪ್ರಡ್ಯೂಸರ್, ಡೈರೆಕ್ಟರ್ ಅನ್ನೋದು ಬಹಳ ಸ್ಪಷ್ಟ ಎಂದು ಕಾಂಗ್ರೆಸ್ ಹಾಗೂ ಡಿ ಕೆ ಶಿವಕುಮಾರ್ ವಿರುದ್ಧ ಸಿ ಟಿ ರವಿ ವಾಗ್ದಾಳಿ ನಡೆಸಿದ್ದಾರೆ.
ಕೊಲ್ಲಾಪುರದಲ್ಲಿ ಕನ್ನಡ ಬಾವುಟ ಸುಡಬೇಕಾದರೆ ಎಂಇಎಸ್ ಜೊತೆ ಇದ್ದ ಕಾಂಗ್ರೆಸ್ ಕಾರ್ಯಕರ್ತರು. ಶಿವಾಜಿ ಪ್ರತಿಮೆಗೆ ಅಪಮಾನ ಮಾಡಿದ್ದು ಕೂಡ ಕಾಂಗ್ರೆಸ್ ಕಾರ್ಯಕರ್ತರು. ಡಿ. ಕೆ.ಶಿವಕುಮಾರ್, ಜಮೀರ್ ಅಹ್ಮದ್ ಕಟ್ಟಾ ಬೆಂಬಲಿಗರಿಂದಲೇ ಕೃತ್ಯ ನಡೆದಿದ್ದು, ಸಂಗೊಳ್ಳಿ ರಾಯಣ್ಣ, ಬಸವೇಶ್ವರ ಪ್ರತಿಮೆಗೆ ಅಪಮಾನ ಕೂಡ ಕಾಂಗ್ರೆಸ್, ಎಂಇಎಸ್ ಕಾರ್ಯಕರ್ತರು ಮಾಡಿದ್ದಾರೆ.
ಜಾತಿ ಸಂಘರ್ಷ ಭಾಷಾ ಸಂಘರ್ಷವನ್ನು ಹುಟ್ಟು ಹಾಕುವುದೇ ಇವರ ಉದ್ದೇಶ. ಹಾಗಾಗಿಯೇ, ಎಂಇಎಸ್ ಸಂಘಟನೆಯನ್ನು ಕೆಪಿಸಿಸಿ ಅಧ್ಯಕ್ಷರು ಸಮರ್ಥನೆ ಮಾಡಿದ್ದಾರೆ. ಈ ಷಡ್ಯಂತ್ರವನ್ನು ಬಯಲಿಗೆಳೆಯಬೇಕು ಎಂದು ಸಿಎಂ, ಗೃಹ ಸಚಿವರನ್ನ ಆಗ್ರಹ ಮಾಡ್ತೇನೆ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿದರು.
ಓದಿ: ಅಖಿಲ ಭಾರತ ಸಸ್ಯಾಹಾರಿಗಳ ಒಕ್ಕೂಟದ ಸ್ವಾಮೀಜಿಗಳು, ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು