ETV Bharat / state

ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿಯ 200 ಅಡಿ ಪ್ರಪಾತಕ್ಕೆ ಬಿದ್ದ ಕಾರು - ಚಿಕ್ಕಮಗಳೂರು ಸುದ್ದಿ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚಾರ್ಮಾಡಿ ಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದೆ. ಈ ಪರಿಣಾಮ ಕಾರಿನಲ್ಲಿದ್ದವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಚಿಕ್ಕಮಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Charmadi ghat
ಕಾರು
author img

By

Published : Dec 5, 2020, 3:22 PM IST

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟಿಯ ಪ್ರಪಾತಕ್ಕೆ ಕಾರು ಉರುಳಿ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಪ್ರಪಾತಕ್ಕೆ ಬಿದ್ದ ಕಾರು

ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ಪ್ರದೇಶದ ಬಿದಿರುತಳದ ಬಳಿ ಈ ಅವಘಡ ನಡೆದಿದ್ದು, ಸುಮಾರು 200 ಅಡಿ ಮೇಲಿಂದ ಕಾರು ಪ್ರಪಾತಕ್ಕೆ ಉರುಳಿ ಬಿದ್ದಿದೆ. ಜಿಲ್ಲೆಯ ತರೀಕೆರೆಯಿಂದ ಧರ್ಮಸ್ಥಳಕ್ಕೆ ಕಾರಿನಲ್ಲಿ ಹೊರಟಿದ್ದ ವೇಳೆ ಈ ಅವಘಡ ಜರುಗಿದೆ.

ಕಾರಿನಲ್ಲಿದ್ದ ರಾಕೇಶ್, ಸಂತೋಷ್, ಶಿವು, ಅಭಿಜಿತ್ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಆಲೇಶ್ ಎಂಬುವವರ ಕಾಲು ಮುರಿದಿದೆ. ಆಲೇಶ್ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರ ಗಾಯಗೊಂಡವರನ್ನು ಚಿಕ್ಕಮಗಳೂರಿನ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಭಾಗದಲ್ಲಿ ತಡೆ ಗೋಡೆ ಇಲ್ಲದೇ ಇರುವುದಕ್ಕೆ ಈ ಅವಘಡ ನಡೆದಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.