ಚಿಕ್ಕಮಗಳೂರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗವಾಗಿ ಚಲಿಸಿದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಳಗೆ ನುಗ್ಗಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಮಧ್ಯೆ ಬಿದರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
![ಮನೆಗೆ ನುಗ್ಗಿದ ಕಾರು](https://etvbharatimages.akamaized.net/etvbharat/prod-images/01-12-2023/kn-ckm-02-car-accident-av-7202347_01122023165814_0112f_1701430094_202.jpg)
ಮಂಗಳೂರು-ವಿಲ್ಲೂಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ, ಮನೆಗೆ ಡಿಕ್ಕಿ ಹೊಡೆದಿದೆ. ಚಾಲಕನ ನಿದ್ರೆಯ ಮಂಪರಿನಿಂದ ಈ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
![ಕಾರು ಅಪಘಾತ](https://etvbharatimages.akamaized.net/etvbharat/prod-images/01-12-2023/kn-ckm-02-car-accident-av-7202347_01122023165814_0112f_1701430094_289.jpg)
ಹೆದ್ದಾರಿ ಬದಿಯಲ್ಲಿ ಇರುವ ಬಿದರಹಳ್ಳಿಯ ಹನೀಫ್ ಎಂಬುವವರ ಮನೆಗೆ ಡಿಕ್ಕಿ ಹೊಡೆದ ರಭಸಕ್ಕೆ ಮನೆಯ ಗೋಡೆ ಕುಸಿದು ಬಿದ್ದಿದೆ. ಪಕ್ಕದಲ್ಲಿಯೇ ಇದ್ದ ವಿದ್ಯುತ್ ಕಂಬಗಳು ತುಂಡಾಗಿ ಬಿದ್ದಿವೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೋವಾ ಹೈಬ್ರೀಡ್ ಕಾರಿನಲ್ಲಿ ಚಿತ್ರದುರ್ಗ ಮೂಲದ ಕುಟುಂಬದವರು ಧರ್ಮಸ್ಥಳದ ಕಡೆಗೆ ಪ್ರಯಾಣಿಸುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ. ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ.
![ಮನೆಗೆ ನುಗ್ಗಿದ ಕಾರು](https://etvbharatimages.akamaized.net/etvbharat/prod-images/01-12-2023/kn-ckm-02-car-accident-av-7202347_01122023165814_0112f_1701430094_80.jpg)
ಡಿವೈಡರ್ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ(ಸೆಪ್ಟೆಂಬರ್ 18-2023) ಬೆಳಗ್ಗೆ ಸ್ವಿಫ್ಟ್ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು. ಗಾಯಗೊಂಡಿದ್ದ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದ ಬಳಿ ಘಟನೆ ನಡೆದಿತ್ತು.
ಸ್ವಿಫ್ಟ್ ಕಾರಿನಲ್ಲಿದ್ದ ಐವರ ಪೈಕಿ ಮೂವರು ದುರ್ಮರಣ ಹೊಂದಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.
ಹಿಂದಿನ ಅಪಘಾತ ಪ್ರಕರಣಗಳು: ನಿಂತಿದ್ದ ಬೈಕ್ಗೆ ಗುದ್ದಿದ ಬಸ್ : ಮಂಗಳೂರಿನಲ್ಲಿ ರಸ್ತೆ ದಾಟಲೆಂದು ನಿಂತಿದ್ದ ಬೈಕ್ಗೆ ವಿರುದ್ಧ ದಿಕ್ಕಿನಲ್ಲಿ ಬಂದ ಖಾಸಗಿ ಬಸ್ ರಭಸವಾಗಿ ಡಿಕ್ಕಿಯಾಗಿ ಇಬ್ಬರು ಗಾಯಗೊಂಡ ಘಟನೆ ನಡೆದಿತ್ತು. ಭಾನುವಾರ ನಗರದ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ನ ಹೊಸಬೆಟ್ಟು ಸಮೀಪ ಘಟನೆ ನಡೆದಿತ್ತು. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಬೆಳಗ್ಗೆ 7:55ರ ವೇಳೆಗೆ ಖಾಸಗಿ ಎಕ್ಸ್‌ಪ್ರೆಸ್ ಬಸ್ ಶರವೇಗದಿಂದ ಬಂದು ಬೈಕ್ಗೆ ಗುದ್ದಿತ್ತು. ಬೈಕ್ ಸವಾರರಾದ ಪಕ್ಷಿಕೆರೆ ಹೊಸಕಾಡು ನಿವಾಸಿ ಅಬ್ದುಲ್ ಖಾದರ್ ಅರ್ಫಾನ್ ಮತ್ತು ಹಳೆಯಂಗಡಿ ಇಂದಿರಾ ನಗರದ ನಿವಾಸಿ ಅಮೀರ್ ಸಾಹಿಲ್ ಗಾಯಗೊಂಡಿದ್ದರು. ತಕ್ಷಣ ಗಾಯಾಳುಗಳನ್ನು ನಗರದ ಎ. ಜೆ ಆಸ್ಪತ್ರೆಗೆ ಸಾಗಿಸಲಾಗಿತ್ತು. ಬಸ್ ಚಾಲಕ ಡೆಲ್ಸನ್ ಕ್ಯಾಸ್ಟಲಿನೋ ಎಂಬಾತನ ವಿರುದ್ಧ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ನೆಲಮಂಗಲ: ಡಿವೈಡರ್ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು, ಇಬ್ಬರಿಗೆ ಗಾಯ