ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ನಿಸರ್ಗ ಹೋಟೆಲ್ ಬಳಿ ಕಾರೊಂದು ಪಲ್ಟಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಂತರ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಲಾಗಿದೆ.
ಗಾಯಗೊಂಡವರು ಶೃಂಗೇರಿಯ ಬಾಗೇವಾಡಿಯ ಹಾಲಂದೂರು ಮೂಲದವರು ಆಗಿದ್ದು, ಚಿಕ್ಕಮಗಳೂರಿನಿಂದ ಮಂಗಳೂರಿನ ಆಸ್ಪತ್ರೆಗೆ ಹೋಗಿ ಬರುವ ಹೊತ್ತಿನಲ್ಲಿ ಈ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಕಾರು ಪಲ್ಟಿಯಾದ ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ಸ್ಥಳೀಯರು ರಕ್ಷಣೆ ಮಾಡಿ, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ತೋಟದ ಮನೆಗೆ ದುಷ್ಕರ್ಮಿಗಳಿಂದ ಬೆಂಕಿ
ಹಳೆಯ ವಿವಾದದ ಕಾರಣಕ್ಕೆ ತೋಟದ ಮನೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೇಕನಗದ್ದೆಯ ಸಮೀಪ ನಡೆದಿದೆ. ವಿಜೇಂದ್ರ ಎಂಬುವರಿಗೆ ಸೇರಿದ ಮನೆ ಇದಾಗಿದೆ ಎನ್ನಲಾಗಿದೆ. ಈ ಕೆಲಸವನ್ನು ಯಾರೋ ಬೇಕೆಂದೇ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
![fire](https://etvbharatimages.akamaized.net/etvbharat/prod-images/14387987_thumb.jpg)
ಈ ಕುರಿತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಹುಲಿ ಬೆಕ್ಕು ಮೃತ
ಮೂಡಿಗೆರೆ ತಾಲೂಕಿನ ಹೇಮಾವತಿ ನದಿ ತೀರದಲ್ಲಿ ಅಳಿವಿನಂಚಿನಲ್ಲಿರುವ ಅಪರೂಪದ ಪ್ರಾಣಿ ಹುಲಿ ಬೆಕ್ಕು ಮೃತಪಟ್ಟಿರುವ ಘಟನೆ ನಡೆದಿದೆ. ಈ ಅಪರೂಪದ ಪ್ರಾಣಿಯನ್ನು ಕಂಡು ಎಲ್ಲರೂ ಒಮ್ಮೆ ಅಚ್ಚರಿಪಟ್ಟಿದ್ದಾರೆ.
ಅತ್ಯಂತ ಅಪರೂಪದ ಪ್ರಾಣಿಯಾದ ಹುಲಿ ಬೆಕ್ಕನ್ನು ನೋಡಿದ ಸ್ಥಳೀಯರು ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಪ್ರಾಣಿಯನ್ನು ನೋಡಿ ಹಾಗೂ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬೇರೆ ಪ್ರಾಣಿಗಳನ್ನು ಬೆನ್ನಟ್ಟಿ ಬಂದು ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ.
![CAT DIED](https://etvbharatimages.akamaized.net/etvbharat/prod-images/14387987_thum.jpg)
ಓದಿ: ಹೆಣ್ಣು ಮಕ್ಕಳಿಗಾಗಿ ಓಬವ್ವ ಆತ್ಮರಕ್ಷಣಾ ಕಲಾ ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕೆ ಸಿಎಂ ಚಾಲನೆ