ETV Bharat / state

ತಾಂತ್ರಿಕ ದೋಷದಿಂದ ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು: ನಾಲ್ವರು ಪಾರು - car burnt on the road due to technical error

ಕಾರೊಂದು ರಸ್ತೆ ಮಧ್ಯದಲ್ಲಿಯೇ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮಂಗಳೂರಿನ ದೇರಳಕಟ್ಟೆಯಿಂದ ಜಾವಗಲ್​​ಗೆ ಪ್ರವಾಸಕ್ಕೆ ತೆರಳುವಾಗ ಘಟನೆ ನಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ..

Car Caught Fire
ತಾಂತ್ರಿಕ ದೋಷದಿಂದ ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು
author img

By

Published : Dec 19, 2021, 3:53 PM IST

ಚಿಕ್ಕಮಗಳೂರು: ತಾಂತ್ರಿಕ ದೋಷ ಹಿನ್ನೆಲೆ, ಕಾರೊಂದು ರಸ್ತೆ ಮಧ್ಯದಲ್ಲಿಯೇ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ, ಚಾರ್ಮಾಡಿ ಘಾಟ್​​ನ ಮಲಯ ಮಾರುತ ಬಳಿ ನಡೆದಿದೆ.

ತಾಂತ್ರಿಕ ದೋಷದಿಂದ ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು

ಮಹೇಂದ್ರ ಲೋಗನ್ ಸುಟ್ಟು ಕರುಕಲಾದ ಕಾರು. ಮಂಗಳೂರಿನ ದೇರಳಕಟ್ಟೆಯಿಂದ ಜಾವಗಲ್​​​ಗೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿ 2 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗ್ತಿದೆ.

car burnt on the road
ಸುಟ್ಟು ಕರಕಲಾದ ಕಾರು

ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಬಣಕಲ್ ಸಬ್ ಇನ್ಸ್​​ಪೆಕ್ಟರ್ ಗಾಯತ್ರಿ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.