ETV Bharat / state

ಕಡೂರು ರಂಗನಾಥ ಸ್ವಾಮಿ ರಥೋತ್ಸವ : 9 ಜನರ ವಿರುದ್ಧ ಪ್ರಕರಣ ದಾಖಲು​​​

ಕಡೂರು ತಾಲೂಕಿನ ಸಖರಾಯಪಟ್ಟಣದ ರಂಗನಾಥ ಸ್ವಾಮಿ ಜಾತ್ರೆಯಲ್ಲಿ ಕೋವಿಡ್​ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಅರ್ಚಕರು ಸೇರಿ 9 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಡಿಸಿ ಆದೇಶ ಮೀರಿ ರಂಗನಾಥ ಸ್ವಾಮಿ ರಥೋತ್ಸವ
ಡಿಸಿ ಆದೇಶ ಮೀರಿ ರಂಗನಾಥ ಸ್ವಾಮಿ ರಥೋತ್ಸವ
author img

By

Published : Jan 20, 2022, 8:28 PM IST

ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ರಂಗನಾಥ ಸ್ವಾಮಿ ಜಾತ್ರೆಯು ಕಳೆದ ಎರಡು ದಿನಗಳ ಹಿಂದೆ ನಡೆದಿತ್ತು. ಆದರೆ ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ರಥೋತ್ಸವ ನಡೆಸಿದ ಹಿನ್ನೆಲೆಯಲ್ಲಿ, ಅರ್ಚಕರು ಸೇರಿ 9 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ರಥೋತ್ಸವ ನಡೆಸದಂತೆ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದರು. ಆದರೆ ಆದೇಶ ಲೆಕ್ಕಿಸದೇ ಸಾವಿರಾರು ಜನರ ಮಧ್ಯೆ ರಥೋತ್ಸವ ಆಚರಣೆ ಮಾಡಲಾಗಿತ್ತು. ಈ ಬಗ್ಗೆ ಕಂದಾಯ ನಿರೀಕ್ಷಕ ಜಿತೇಂದ್ರ ಎಂಬುವರು ದೂರು ನೀಡಿದ್ದು, ದೇಗುಲದ ಅರ್ಚಕ ಕೃಷ್ಣ ಭಟ್​​, ನವೀನ್, ವರುಣ್, ರೀತು, ಸಂದೀಪ್, ಸಚಿನ್, ಗಣೇಶ್, ಉಲ್ಲಾಸ್, ನಿತಿನ್ ವಿರುದ್ಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹಿರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.