ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ಕೇಂದ್ರ ಸರ್ಕಾರ ಅಸ್ತು ಅಂದಿದೆ. ಈ ಮೂಲಕ ಅನೇಕ ವರ್ಷಗಳಿಂದ ಹಲವಾರು ಸಂಘಟನೆಗಳು ನಡೆಸಿದ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.
ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಸಂಸದೆ ಶೋಭಾ ಕರಂದ್ಲಾಜ್ಞೆಗೆ ಈ ಕುರಿತ ಆದೇಶದ ಪ್ರತಿ ಹಸ್ತಾಂತರಿಸಿದ್ದಾರೆ. ಜಿಲ್ಲೆಯಲ್ಲಿ ಮಲ್ಟಿ ಸ್ವೆಷಾಲಿಟಿ ಆಸ್ವತ್ರೆ ನಿರ್ಮಿಸಲು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಕೂಡ ಶತ ಪ್ರಯತ್ನ ನಡೆಸಿದ್ದರು.