ಚಿಕ್ಕಮಗಳೂರು: ರಾಜ್ಯದ 22 ಜಿಲ್ಲೆಗಳು ನೆರೆ ಹಾವಳಿಯಿಂದ ತತ್ತರಿಸಿ 60 ದಿನಗಳು ಕಳೆದಿವೆ. ಕೇಂದ್ರ ಸರ್ಕಾರ ಕೇವಲ 1200 ಕೋಟಿ ರೂ ಹಣ ಬಿಡುಗಡೆ ಮಾಡಿದೆ. 56 ಇಂಚು ಅಗಲದ ಎದೆಯಲ್ಲಿ ಮಾತೃ ಹೃದಯ ಇರಬೇಕು ಎಂದು ಪ್ರಧಾನಿ ಮೋದಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಂದಾಯ ಸಚಿವ ಆರ್.ಅಶೋಕ್ ಒಪ್ಪಿಕೊಂಡಂತೆ ರಾಜ್ಯದಲ್ಲಿ ಬರ ಹಾಗೂ ಪ್ರವಾಹ ಎರಡೂ ಇದೆ. ಪ್ರಧಾನಿ ಮಾತ್ರ ಅಮೆರಿಕಾದ ಅಧ್ಯಕ್ಷ ಟ್ರಂಪ್ ಪರ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ದೇಶ ಸುತ್ತುವ ಮೋದಿಗೆ ರಾಜ್ಯದ ನೋವು, ಸಂಕಟ ಅರ್ಥವಾಗುವುದಿಲ್ಲ ಎಂದು ಕಿಡಿಕಾರಿದರು.
ಪ್ರವಾಹದಿಂದ ಅರ್ಧ ರಾಜ್ಯವೇ ನೆಲಕಚ್ಚಿದೆ. ಕೇಂದ್ರ ಸರ್ಕಾರ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಲ್ಲಿ, ಸ್ಪಂದಿಸುವಲ್ಲಿ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದರು.