ETV Bharat / state

ಸರಗಳ್ಳತನ: ಚಿಕ್ಕಮಗಳೂರು ಪೊಲೀಸರಿಂದ ಇಬ್ಬರ ಬಂಧನ - ಚಿಕ್ಕಮಗಳೂರು ಸರಗಳ್ಳತನ ಪ್ರಕರಣ

ಸರಗಳ್ಳತನ ಕೃತ್ಯಗಳಲ್ಲಿ ತೊಡಗಿದ್ದ ಉಪ್ಪಳ್ಳಿಯ ಜುನ್ನ (27) ಹಾಗು ಕಿಶೋರ್ (29) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

Chickmagaluru chain snatching case
Chickmagaluru chain snatching case
author img

By

Published : Jul 21, 2020, 5:18 PM IST

ಚಿಕ್ಕಮಗಳೂರು: ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಚಿಕ್ಕಮಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ನಗರ ಪೊಲೀಸ್ ಠಾಣೆಯ ಒಟ್ಟು 02 ಪ್ರಕರಣಗಳು, ಗ್ರಾಮಾಂತರ ಠಾಣೆಯ 01 ಪ್ರಕರಣ ಸೇರಿದಂತೆ ಒಟ್ಟು 03 ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿದ್ದರು. ಜನವಿರಳ ಪ್ರದೇಶಗಳಲ್ಲಿ ಸಂಚರಿಸುತ್ತಿದ್ದ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ ಖದೀಮರು ದ್ವಿಚಕ್ರ ವಾಹನಗಳಲ್ಲಿ ಬಂದು ಕತ್ತಲ್ಲಿದ್ದ ಸರ ಎಗರಿಸುತ್ತಿದ್ದರು. ಬಂಧಿತರಿಂದ ಒಟ್ಟು 1.91 ಲಕ್ಷ ರೂ. ಮೌಲ್ಯದ 48.6 ಗ್ರಾಂ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ಒಂದು ಪಲ್ಸರ್ ಬೈಕ್ ಅನ್ನು ವಶಕ್ಕೆ ಪಡೆದಿದ್ದಾರೆ.

ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗೆ ಸಂಬಂಧಿಸಿದಂತೆ ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.