ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿರುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಇಂದಿನಿಂದ ಮುಕ್ತ ಅವಕಾಶವನ್ನು ಚಿಕ್ಕಮಗಳೂರು ಜಿಲ್ಲಾಡಳಿತ ಮಾಡಿಕೊಟ್ಟಿದೆ.
ಕೆಲ ದಿನಗಳು ಕೇವಲ ಲಘು ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಆದರೆ ಇಂದಿನಿಂದ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಂದ ವಾಹನಗಳ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದ್ದು, ಬೆಳಗ್ಗೆ 6ರಿಂದ ಸಂಜೆ 6ರವರೆಗೂ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕೆಎಸ್ಆರ್ಟಿಸಿ ಬಸ್ ಸೇರಿದಂತೆ ಲಘು ವಾಹನಗಳಿಗೆ ಜಿಲ್ಲಾಡಳಿತ ಅವಕಾಶ ಕಲ್ಪಸಿದ್ದು, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಈ ಆದೇಶ ಹೊರಡಿಸಿದ್ದಾರೆ.