ETV Bharat / state

ಅರಣ್ಯ ಯೋಜನೆಗಳಿಗೆ ವಿರೋಧ: ಗ್ರಾ. ಪಂ. ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಜನ - chickmagaluru election boycott news

ಖಾಂಡ್ಯ ಹೋಬಳಿಯ ಕಡವಂತಿ, ಹುಯಿಗೆರೆ, ದೇವದಾನ ಹಾಗೂ ಬಿದರೆ ಗ್ರಾಮ ಪಂಚಾಯತ್​​ ವ್ಯಾಪ್ತಿಯ ಜನ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಚುನಾವಣೆಗೆ ಯಾರಾದರು ನಾಮಪತ್ರ ಸಲ್ಲಿಸಿದರೆ ಅವರಿಗೆ ಹಾರ ಹಾಕಿ ಅಂತಹವರ ಮನೆ ಮುಂದೆ ಧರಣಿ ಕೂರುವುದಾಗಿ ಖಾಂಡ್ಯ ನಾಗರಿಕ ಹಿತರಕ್ಷಣಾ ವೇದಿಕೆ ಹಾಗೂ ಕೆಲ ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.

chickmagaluru people decided to boycott the election
ಗ್ರಾಮ ಪಂಚಾಯತ್ ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಮಲೆನಾಡಿಗರು
author img

By

Published : Dec 2, 2020, 12:06 PM IST

ಚಿಕ್ಕಮಗಳೂರು: ಗ್ರಾಮ ಪಂಚಾಯತ್​​ ಚುನಾವಣೆಗೆ ಯಾರಾದರು ನಾಮಪತ್ರ ಸಲ್ಲಿಸಿದರೆ ಅವರಿಗೆ ಹಾರ ಹಾಕಿ, ಅಂತಹವರ ಮನೆ ಮುಂದೆ ಧರಣಿ ಕೂರುವುದಾಗಿ ಮಲೆನಾಡಿಗರು ಎಚ್ಚರಿಕೆ ನೀಡಿದ್ದಾರೆ. ತಾಲೂಕಿನ ಖಾಂಡ್ಯ ಹೋಬಳಿಯ ನಾಲ್ಕು ಗ್ರಾಮ ಪಂಚಾಯತ್​​ ವ್ಯಾಪ್ತಿಯ ಜನರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ಆನ್​ಲೈನ್​​​ ಸೇರಿದಂತೆ ಯಾವುದೇ ವಿಧದಲ್ಲೂ ಯಾರೂ ಕೂಡ ನಾಮಪತ್ರ ಸಲ್ಲಿಸಬಾರದು ಎಂದು ಖಾಂಡ್ಯ ನಾಗರಿಕ ಹಿತರಕ್ಷಣಾ ವೇದಿಕೆ ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ. ನಮ್ಮ ಬದುಕು ಬೀದಿಗೆ ಬೀಳುವಾಗ ಚುನಾವಣೆ ಬೇಕೇ? ಎಂಬ ಪ್ರಶ್ನೆ ಮಲೆನಾಡಿಗರಲ್ಲಿ ಮೂಡಿದೆ.

chickmagaluru people decided to boycott the election
ಚುನಾವಣೆ ಬಹಿಷ್ಕಾರದ ಎಚ್ಚರಿಕೆ ​​​

ಈಗಾಗಲೇ ಮಲೆನಾಡಿಗರ ಬದುಕಿನ ಮೇಲೆ ಹುಲಿ ಯೋಜನೆ, ಬಫರ್ ಝೋನ್, ಕಸ್ತೂರಿ ರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯದ ತೂಗುಗತ್ತಿ ತೂಗುತ್ತಿದೆ. ಸರ್ಕಾರದ ಈ ಯೋಜನೆಗಳಿಂದ ಜಿಲ್ಲೆಯ ಮಲೆನಾಡು ಭಾಗದ ನೂರಾರು ಗ್ರಾಮಗಳೇ ಕಣ್ಮರೆಯಾಗಲಿವೆ. ಹಾಗಾಗಿ, ಮಲೆನಾಡಿಗರು ಚುನಾವಣಾ ಬಹಿಷ್ಕಾರಕ್ಕೆ ಸಿದ್ಧತೆ ನಡೆಸಿದ್ದಾರೆ.

ಈ ಸುದ್ದಿಯನ್ನೂ ಓದಿ: ಮೂಲಸೌಕರ್ಯ ಮರೀಚಿಕೆ: ಚುನಾವಣಾ ಬಹಿಷ್ಕಾರದ ಬ್ಯಾನರ್​ ಅಳವಡಿಸಿದ ತಡಗಜೆ ಗ್ರಾಮಸ್ಥರು

ಖಾಂಡ್ಯ ಹೋಬಳಿಯ ಕಡವಂತಿ, ಹುಯಿಗೆರೆ, ದೇವದಾನ ಹಾಗೂ ಬಿದರೆ ಗ್ರಾಮ ಪಂಚಾಯತ್​​ ವ್ಯಾಪ್ತಿಯ ಜನ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಈಗಾಗಲೇ ಅಲ್ಲಲ್ಲಿ ಬ್ಯಾನರ್ ಕಟ್ಟಿದ್ದು, ಚುನಾವಣೆ ಬಹಿಷ್ಕಾರದ ಕೂಗು ಜೋರಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.