ಚಿಕ್ಕಮಗಳೂರು: ಕಾಫಿನಾಡಲ್ಲಿ ಕೊರೊನಾ 2ನೇ ಅಲೆಗೆ ಮತ್ತೊಂದು ಬಲಿ ಆಗಿದ್ದು, ಉಸಿರಾಟದ ಸಮಸ್ಯೆಯಿಂದ ಮೂಡಿಗೆರೆ ಮೂಲದ ಮಹಿಳೆ ಸಾವನ್ನಪ್ಪಿದ್ದಾರೆ.
ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಇಂದಿರಮ್ಮ (55) ತೀವ್ರ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ.
ಪಿಪಿಇ ಕಿಟ್ ಧರಿಸಿ ಸಮಾಜ ಸೇವಕ ಫಿಶ್ ಮೊಣು ಮೂಡಿಗೆರೆಯ ಚಿತಾಗಾರದಲ್ಲಿ ಮೃತ ಮಹಿಳೆಯ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆಗೆ 7 ಮಂದಿ ಸಾವನ್ನಪ್ಪಿದ್ದಾರೆ.