ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ಬಸ್ ಸಂಚಾರ ಆದೇಶ ವಾಪಸ್ ಪಡೆದು ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಹೇಳಿದ್ದಾರೆ.
ಬಸ್ ಸಂಚಾರದ ಆದೇಶಕ್ಕೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ತಾತ್ಕಾಲಿಕವಾಗಿ ತಡೆ ನೀಡಿದ್ದು, ಚಾರ್ಮಾಡಿ ಘಾಟ್ನಲ್ಲಿ ಮತ್ತೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಇದೀಗ ಲಘು ವಾಹನಗಳ ಸಂಚಾರಕ್ಕಷ್ಟೇ ಅನುಮತಿ ನೀಡಲಾಗಿದೆ.
ಓದಿ:2 ವರ್ಷಗಳ ಬಳಿಕ ಚಾರ್ಮಾಡಿ ಘಾಟಿಯಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಅವಕಾಶ
ನಿನ್ನೆ ಸಂಜೆ ಬಸ್-ಲಾರಿಗಳ ಸಂಚಾರಕ್ಕೆ ಅನುಮತಿ ನೀಡಿ ಎಂದು ಆದೇಶ ಹೊರಡಿಸಲಾಗಿತ್ತು. ಇದೀಗ ಮಂಗಳೂರು ಡಿಸಿ ಸೂಚನೆ ಮೇರೆಗೆ ಮತ್ತೆ ನಿಷೇಧ ಹೇರಲಾಗಿದ್ದು, ಸಂಜೆ ಆದೇಶವನ್ನ ತಾತ್ಕಾಲಿಕವಾಗಿ ಹಿಂಪಡೆದಿದ್ದರಿಂದ ಲಾರಿ ಚಾಲಕರು ಪರದಾಡುವಂತಾಯಿತು.