ETV Bharat / state

ಕಳಸ ತಾಲೂಕು ಆಸ್ಪತ್ರೆಯಲ್ಲಿ ಶವ ಪರೀಕ್ಷೆಗೆ ವೈದ್ಯರಿಲ್ಲದೆ ಪರದಾಟ - ಈಟಿವಿ ಭಾರತ್​ ಕನ್ನಡ ನ್ಯೂಸ್

ಕಳಸ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಇರುವುದರಿಂದ ಮರಣೋತ್ತರ ಪರೀಕ್ಷೆಗೆ ಪರದಾಡುವ ಪರಿಸ್ಥಿತಿ ಎದುರಾಗಿತ್ತು.

ಕಳಸ ತಾಲೂಕು ಸರ್ಕಾರಿ ಆಸ್ಪತ್ರೆ
author img

By ETV Bharat Karnataka Team

Published : Sep 24, 2023, 5:28 PM IST

ಚಿಕ್ಕಮಗಳೂರು : ಜಿಲ್ಲೆಯ ಕಳಸ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆಗೆ ವೈದ್ಯರೇ ಇಲ್ಲದೆ ಬರೋಬ್ಬರಿ 9 ಗಂಟೆಗಳ ಕಾಲ ಮರಣೋತ್ತರ ಪರೀಕ್ಷೆಗೆ ಪೊಲೀಸರೇ ಪರದಾಡಿದ ಘಟನೆ ನಡೆದಿದೆ.

ಕಳಸದ ಭದ್ರಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ತೇಲುತ್ತಿದ್ದನ್ನು ಗಮನಿಸಿದ ಸ್ಥಳಿಯರು ವಿಷಯವನ್ನು ಪೊಲೀಸರ ಗಮನಕ್ಕೆ ತಂದಿದ್ದಾರೆ. ತಕ್ಷಣ ಸ್ಥಳಕ್ಕೆ ಹೋದ ಪೊಲೀಸರು ಮೃತ ದೇಹವನ್ನು ಕಳಸ ತಾಲೂಕು ಆಸ್ಪತ್ರೆಗೆ ರವಾನಿಸಿದ್ದರು. ಆದರೆ, ತಾಲೂಕು ಆಸ್ಪತ್ರೆಯಲ್ಲಿ ವೈದ್ಯರೇ ಇಲ್ಲದೇ ಮರಣೋತ್ತರ ಪರೀಕ್ಷೆಗೆ 9 ಗಂಟೆಗಳ ಕಾಲ ಶವ ಆಸ್ಪತ್ರೆಯಲ್ಲೇ ಕೊಳೆಯುವಂತ ಸ್ಥಿತಿ ನಿರ್ಮಾಣವಾಗಿತ್ತು.

ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಸರ್ಕಾರ ಕಳಸವನ್ನು ತಾಲೂಕು ಕೇಂದ್ರ ಎಂದು ಘೋಷಿಸಿದೆ. ಆದರೆ, ಸಣ್ಣಪುಟ್ಟ ಚಿಕಿತ್ಸೆಗೂ ದೂರದ ಊರುಗಳಿಗೆ ಹೋಗಬೇಕಾದ ಪರಿಸ್ಥಿತಿ ಇದೆ. ಸರ್ಕಾರ ಕೂಡಲೇ ಕಳಸ ತಾಲೂಕು ಆಸ್ಪತ್ರೆಗೆ ಖಾಯಂ ವೈದ್ಯರನ್ನು ನೇಮಕ ಮಾಡಬೇಕು. ಇಲ್ಲವಾದರೆ ನಾಳೆ ಸರ್ಕಾರ ಹಾಗು ಜಿಲ್ಲಾಡಳಿತದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.

ಇದನ್ನೂ ಓದಿ : ಹುಬ್ಬಳ್ಳಿ ಕಿಮ್ಸ್ ಸಿಬ್ಬಂದಿ ಯಡವಟ್ಟು : ಜನಿಸಿದ್ದು ಗಂಡು, ತಾಯಿ ಕೈಗೆ ಕೊಟ್ಟಿದ್ದು ಹೆಣ್ಣು ಶಿಶು.. ಮುಂದೆ ಆಗಿದ್ದೇನು?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.