ETV Bharat / state

ಚಿಕ್ಕಮಗಳೂರು ಲವ್ ಜಿಹಾದ್ ಆರೋಪ ಪ್ರಕರಣ: ದೂರು ನೀಡಿದ ಯುವತಿ - ಲವ್ ಜಿಹಾದ್ ಪಿತೂರಿ ಆರೋಪ

ಕೆಲ ದಿನಗಳ ಹಿಂದೆ ಯುವತಿಯ ಸಹೋದರ ಲವ್ ಜಿಹಾದ್ ಪಿತೂರಿ ಆರೋಪ ಹೊರಿಸಿ ಕೊಪ್ಪ ಮೂಲದ ಯುವಕನ ವಿರುದ್ಧ ದೂರು ನೀಡಿದ್ದರು.

Love Jihad Allegation Case
ಚಿಕ್ಕಮಗಳೂರು ಲವ್ ಜಿಹಾದ್ ಆರೋಪ ಪ್ರಕರಣ
author img

By

Published : Nov 21, 2022, 12:55 PM IST

ಚಿಕ್ಕಮಗಳೂರು: ಕೊಪ್ಪ ತಾಲೂಕಿನಲ್ಲಿ ಕೇಳಿಬಂದಿದ್ದ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನೊಂದ ಯುವತಿಯು ಯುವಕ ಸೇರಿದಂತೆ ಮೂವರ ವಿರುದ್ಧ ಹರಿಹರಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

'ಕಳೆದ ಮೂರು ವರ್ಷಗಳಿಂದ ನನಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ. ತಂಪು ಪಾನೀಯದಲ್ಲಿ ಅಮಲು ಪದಾರ್ಥವನ್ನು ಬೆರೆಸಿ ಬಲವಂತವಾಗಿ ಕುಡಿಸಿ ನನ್ನ ಫೋಟೋ ಹಾಗೂ ವಿಡಿಯೋ ತೆಗೆದು ಬ್ಲ್ಯಾಕ್​ಮೇಲ್​ ಮಾಡುತ್ತಿದ್ದಾರೆ. ತಾಳಿ ಕಟ್ಟುವ ರೀತಿಯಲ್ಲೂ ಫೋಟೋ ತೆಗೆದುಕೊಂಡು ಬ್ಲ್ಯಾಕ್​ಮೇಲ್​ ಮಾಡುತ್ತಿದ್ದಾರೆ' ಎಂದು ದೂರಿದ್ದಾಳೆ.

ಈಗ ಯುವಕ ವಿದೇಶದಲ್ಲಿ ಕುಳಿತು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡುತ್ತಿದ್ದಾನೆ. ಇದರಿಂದ ನನ್ನ ಹಾಗೂ ಮನೆಯವರ ಮಾನಸಿಕ ನೆಮ್ಮದಿ ಹಾಳಾಗಿದೆ. ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿರುವ ಫೋಟೋಗಳನ್ನು ಡಿಲಿಟ್ ಮಾಡಿ ಯುವಕ ಹಾಗೂ ಇನ್ನುಳಿದ ಇಬ್ಬರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾಳೆ.

ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ಲವ್ ಜಿಹಾದ್ ಆರೋಪ : ಯುವತಿಯ ಸಹೋದರನಿಂದ ಯುವಕನ ವಿರುದ್ಧ ದೂರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.