ಚಿಕ್ಕಮಗಳೂರು: ನಗರದಲ್ಲಿರುವ ಎಪಿಎಂಸಿ ಆವರಣದಲ್ಲಿ ಜನರು ಲಾಕ್ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ.
ನಗರದಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಜನರು ಬೀದಿಗೆ ಬಂದಿದ್ದು, ತರಕಾರಿ ಖರೀದಿಗೆ ಜನರು ಮುಗಿ ಬಿದ್ದಿದ್ದಾರೆ. ಸಾಮಾಜಿಕ ಅಂತರವಿಲ್ಲದೆ ಗುಂಪು ಗುಂಪಾಗಿ ತರಕಾರಿ ಖರೀದಿಯಲ್ಲಿ ನಿರತರಾಗಿದ್ದಾರೆ. ಪೊಲೀಸರ ಸೂಚನೆಗೂ ಕ್ಯಾರೇ ಎನ್ನದ ಜನರಿಂದ ತರಕಾರಿ ವ್ಯಾಪಾರ ವಹಿವಾಟು ಜೋರಾಗಿ ನಡೆಯುತ್ತಿದೆ.
ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ನಡೆಯುತ್ತಿದ್ದು, ಚಿಕ್ಕಮಗಳೂರು ಜನರು ಎಚ್ಚರ ತಪ್ಪುತ್ತಿದ್ದಾರೆ ಎಂಬ ಆತಂಕ ವ್ಯಕ್ತವಾಗುತ್ತಿದೆ.