ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ ವಶಕ್ಕೆ ಪಡೆದಿದ್ದ 24 ಮಂದಿ PFI, SDPI ಕಾರ್ಯಕರ್ತರನ್ನು ಬಾಂಡ್ ಸಹಿ ಪಡೆದು ಬಿಡುಗಡೆ ಮಾಡಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಡೂರು ತಹಶೀಲ್ದಾರ್ ಮುಂದೆ ಹಾಜರುಪಡಿಸಿ, ಕಾರ್ಯಕರ್ತರಿಂದ ಬಾಂಡ್ ಸಹಿ ಪಡೆದು ಸಂಜೆ ವೇಳೆಗೆ ಬಿಡುಗಡೆ ಮಾಡಲಾಯಿತು.
ತಹಶೀಲ್ದಾರ್ ಮುಂದೆ ಹಾಜರುಪಡಿಸಿ PFI SDPI ಕಾರ್ಯಕರ್ತರ ಬಿಡುಗಡೆ: ಚಿಕ್ಕಮಗಳೂರು, ಕಡೂರು, ಬೀರೂರು, ಮೂಡಿಗೆರೆ, ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಪೊಲೀಸರು ದಾಳಿ ಮಾಡಿ 24 ಜನರನ್ನು ವಶಕ್ಕೆ ಪಡೆದಿದ್ದರು. ಬಳಿಕ ಆಯಾ ವ್ಯಾಪ್ತಿಯ ತಹಶೀಲ್ದಾರ್ ಮುಂದೆ ಹಾಜರುಪಡಿಸಲಾಯಿತು.
ಈ ವೇಳೆ ತಹಶೀಲ್ದಾರ್ ಕಚೇರಿ ಮುಂದೆ ಘೋಷಣೆ ಕೂಗಿ ಬಂಧಿತರು ಆಕ್ರೋಶ ವ್ಯಕ್ತಪಡಿಸಿದ್ದರು. ಮನೆಯಲ್ಲಿ ಮಲಗಿದ್ದವರನ್ನು ಪೊಲೀಸರು ಎತ್ತುಕೊಂಡು ಬಂದಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಬಂಧಿತರು ಘೋಷಣೆ ಕೂಗಿದರು.