ETV Bharat / state

ಬಾರ್ ಓಪನ್ ಆದ ಒಂದೇ ವರ್ಷದಲ್ಲಿ ಏಳು ಜನರ ಸಾವು.. ಮದ್ಯದ ಅಂಗಡಿ ತೆರವಿಗೆ ಒತ್ತಾಯಿಸಿ ಜನರ ಪ್ರತಿಭಟನೆ

ಬಾರ್​ ಎದುರು ಒಂದು ವರ್ಷದಲ್ಲಿ ಏಳು ಜನ ಅಪಘಾತದಿಂದ ಸತ್ತಿದ್ದಾರೆ. ಬಾರ್​ನಿಂದ ಸಮಸ್ಯೆ ಆಗುತ್ತಿದೆ ಎಂದು ಸಾರ್ವಜನಿಕರು ಪ್ರತಿಭಟಿಸಿದ್ದು, ತೆರವು ಗೊಳಿಸುವಂತೆ ಅಬಕಾರಿ ಅಧಿಕಾರಿಗಳಲ್ಲಿ ಮನವಿ ಸಲ್ಲಿಸಿದ್ದಾರೆ.

author img

By

Published : Aug 13, 2022, 9:25 PM IST

chikkamagaluru-protest-to-close-the-bar
ಸಾರ್ವಜನಿಕರಿಂದ ಅಂಗಡಿ ತೆರೆವು ಪ್ರತಿಭಟನೆ

ಚಿಕ್ಕಮಗಳೂರು : ಬಾರ್ ಓಪನ್ ಆದ ಒಂದೇ ವರ್ಷದಲ್ಲಿ ಬಾರ್ ಮುಂದೆ ನಡೆದ ಅಪಘಾತದಿಂದ ಏಳಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಹಾಗಾಗಿ ಕೂಡಲೇ ಬಾರ್ ಬಂದ್ ಮಾಡುವಂತೆ ಸ್ಥಳೀಯರು ಬಾರ್ ಮುಂದೆ ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಸಮೀಪದ ಭಕ್ತರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಎರಡು ದಿನಗಳ ಹಿಂದೆ ಇದೇ ಬಾರ್ ಮುಂದೆ ಬಾರ್‌ನಿಂದ ಹೊರ ಬಂದ ಇಬ್ಬರು ಯುವಕರಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕಳೆದೊಂದು ವರ್ಷದಲ್ಲಿ ಸುಮಾರು ಏಳಕ್ಕೂ ಹೆಚ್ಚು ಜನ ಇದೇ ಬಾರ್ ಮುಂದೆ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಇದರಿಂದ ಕುಟುಂಬದ ಮುಖ್ಯಸ್ಥರನ್ನು ಕಳೆದುಕೊಂಡು ಬಡ ಕುಟುಂಬಗಳು ಬೀದಿಗೆ ಬೀಳುತ್ತಿವೆ.

ಆ ಕುಟುಂಬಗಳನ್ನು ನೋಡಿಕೊಳ್ಳುವುದು ಯಾರೆಂದು ಸ್ಥಳೀಯರು ಸರ್ಕಾರಕ್ಕೆ ಪ್ರಶ್ನಿಸಿದ್ದು, ಪದೇ ಪದೇ ಇಂತಹ ಪ್ರಕರಣಗಳು ನಡೆಯುತ್ತಿರುವುದರಿಂದ ರೊಚ್ಚಿಗೆದ್ದ ಜನ ಕೂಡಲೇ ಬಾರ್ ಬಂದ್ ಮಾಡುವಂತೆ ಆಗ್ರಹಿಸಿದ್ದಾರೆ. ಊರಿನ ಜನ ಬಾರ್ ಮುಂದೆ ಪ್ರತಿಭಟನೆ ನಡೆಸಿ ಬಾರ್ ಕ್ಲೋಸ್ ಮಾಡುವಂತೆ ಆಗ್ರಹಿಸಿದ್ದಾರೆ. ಈ ವೇಳೆ, ಬಾರ್ ಮಾಲೀಕರು, ಸ್ಥಳೀಯರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ಕೂಡ ನಡೆದಿದೆ.

ಸ್ಥಳಕ್ಕೆ ಅಬಕಾರಿ ಇಲಾಖೆ ಹಾಗೂ ಡಿವೈಎಸ್‍ಪಿ ಭೇಟಿ ನೀಡಿ ಪ್ರತಿಭಟನಾನಿರತರನ್ನು ಸಮಾಧಾನ ಮಾಡಿದ್ದಾರೆ. ಮುಂದಿನ 10 ದಿನಗಳವರೆಗೆ ಬಾರ್ ಓಪನ್ ಮಾಡದಂತೆ ಬಾರ್ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. 10 ದಿನಗಳ ಒಳಗೆ ಬಾರ್‌ ಸ್ಥಳಾಂತರಿಸುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ. ಸ್ಥಳೀಯರು ಕೂಡ ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. 10 ದಿನಗಳಲ್ಲಿ ಬಾರ್ ಕ್ಲೋಸ್ ಆಗಬೇಕು ಅಥವಾ ಸ್ಥಳಾಂತರಗೊಳ್ಳಬೇಕು. ಒಂದು ವೇಳೆ ಬಾರ್ ಮತ್ತೆ ಓಪನ್ ಆದರೆ ಹೋರಾಟ ಮುಂದುವರಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಸಹೋದರನಿಗೆ ರಾಖಿ ಕಟ್ಟಲು ಹೋಗ್ತಿದ್ದ ಅಪ್ರಾಪ್ತೆ ಮೇಲೆ ಗ್ಯಾಂಗ್​ ರೇಪ್​.. ಮೂವರು ಕಾಮುಕರಿಂದ ದುಷ್ಕೃತ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.