ETV Bharat / state

ಚಿಕ್ಕಮಗಳೂರು: ಸೋಂಕಿನಿಂದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಗುಣಮುಖ - corona news

ಚಿಕ್ಕಮಗಳೂರಿನ ಕಡೂರು ತಾಲೂಕಿನ ಕೆ. ದಾಸರಹಳ್ಳಿ ಗ್ರಾಮದ ಎಸ್​​ಎಸ್​ಎಲ್​​ಸಿ ವಿದ್ಯಾರ್ಥಿಗೆ ಕೊರೊನಾ ಸೋಂಕು ತಗುಲಿರುವುದು ಜೂನ್​​ 11 ರಂದು ದೃಢವಾಗಿತ್ತು. ಸೋಂಕಿನಿಂದ ವಿದ್ಯಾರ್ಥಿ ಗುಣಮುಖವಾದ ಹಿನ್ನೆಲೆ ಕೋವಿಡ್​-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಡಿಸ್ಚಾರ್ಜ್​ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್
ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್
author img

By

Published : Jun 17, 2020, 5:29 PM IST

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಕೆ. ದಾಸರಹಳ್ಳಿ ಗ್ರಾಮದ ಎಸ್​​ಎಸ್​ಎಲ್​​ಸಿ ವಿದ್ಯಾರ್ಥಿಗೆ, ಇದೇ ತಿಂಗಳ 11 ರಂದು ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಇಂದು ವಿದ್ಯಾರ್ಥಿ ಗುಣಮುಖವಾದ ಹಿನ್ನೆಲೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ತಿಳಿಸಿದ್ದಾರೆ.

ಸೋಂಕು ಇರುವುದು ದೃಢವಾದ ನಂತರ ವಿದ್ಯಾರ್ಥಿಗೆ ಕೋವಿಡ್​-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಗುಣಮುಖ ಆಗಿರುವುದರಿಂದ ಇಂದು ಬೆಳಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್

ಅಲ್ಲದೇ ಎಸ್​ಎಸ್​ಎಲ್​​ಸಿ ಪರೀಕ್ಷೆ ಬರೆಯಬೇಕಾಗಿರುವ ಕಾರಣ, ಅವರಿಗೆ ಕೌನ್ಸಿಲಿಂಗ್ ಕೂಡ ಮಾಡಲಾಗಿದೆ. ಯಾವುದೇ ರೀತಿಯ ತೊಂದರೆ ಇಲ್ಲ. ಮೊದಲ ಬಾರಿ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿತ್ತು. ನಂತರ ನಾಲ್ಕು ಬಾರಿ ಟೆಸ್ಟ್ ಮಾಡಿದಾಗ ನೆಗೆಟಿವ್ ಬಂದಿದೆ.

ವಿದ್ಯಾರ್ಥಿಯ ಪ್ರಾಥಮಿಕ ಸಂಪರ್ಕಿತರ ವರದಿಯೂ ನೆಗೆಟಿವ್ ಎಂದು ಬಂದಿದೆ. ಎಸ್​ಎಸ್​ಎಲ್​​ಸಿ ವಿದ್ಯಾರ್ಥಿಗೆ ಮಾಡಿದ ಮೊದಲ ಟೆಸ್ಟ್​ನ ಗಂಟಲು ದ್ರವ, ರಕ್ತ ಮಾದರಿಯನ್ನು ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿ ಕೊಡಲಾಗಿದೆ. ಆ ರಿಪೋರ್ಟ್ ಇನ್ನೂ ಬಂದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.