ಚಿಕ್ಕಮಗಳೂರು: ರಷ್ಯಾ-ಉಕ್ರೇನ್ ಮಧ್ಯೆ ಯುದ್ಧ ಆರಂಭವಾಗಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ವಿಮಾನ ಸೇವೆ ಸ್ಥಗಿತಗೊಂಡಿದ್ದು, ಉಕ್ರೇನ್‌ನಲ್ಲಿ ಕಾಫಿನಾಡು ಮೂಲದ ವಿದ್ಯಾರ್ಥಿ ಸಿಲುಕಿಕೊಂಡಿದ್ದಾರೆ.
ಎಂಬಿಬಿಎಸ್ ವಿದ್ಯಾಭ್ಯಾಸ ಮಾಡಲು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೊಸಳ್ಳಿಯ ಇಂದ್ರೇಶ್ ಅವರ ಪುತ್ರ ಪ್ರದ್ವಿನ್ ಉಕ್ರೇನ್ಗೆ ತೆರಳಿದ್ದರು. ಉಕ್ರೇನ್ನ ಖಾರ್ಕಿವ್ ನಗರದ ಖಾರ್ಕಿವ್ ಇಂಟರ್ನ್ಯಾಷನಲ್ ಮೆಡಿಕಲ್ ಕಾಲೇಜಿನಲ್ಲಿ ಪ್ರದ್ವಿನ್ ಮೂರನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾನೆ.
ಇದನ್ನೂ ಓದಿ: ಉಕ್ರೇನ್‌ನಲ್ಲಿ ಸಿಲುಕಿಕೊಂಡ ಬಾಗಲಕೋಟೆಯ ಇಬ್ಬರು MBBS ವಿದ್ಯಾರ್ಥಿಗಳು
ಇದೀಗ ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದು, ಪುತ್ರನನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆ ತರುವಂತೆ ಪೋಷಕರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.