ಚಿಕ್ಕಮಗಳೂರು : ಕಸ್ತೂರಿ ರಂಗನ್ ವರದಿ ವಿರೋಧಿಸಿ ಜಿಲ್ಲೆಯ ಕೆಲ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕರಿಸಿ ನೂರಾರು ಜನರು ಪಂಜಿನ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕರಿಸಿ ಚಿಕ್ಕಮಗಳೂರು ತಾಲೂಕಿನ ಸಿರವಾಸೆ ಗ್ರಾಮದಲ್ಲಿ ನೂರಾರು ಜನರು ಪಂಜಿನ ಮೆರವಣಿಗೆ ನಡೆಸಿದ್ದಾರೆ.
ಪ್ರಮುಖವಾಗಿ ಗಾಳಿಗುಡ್ಡೆ, ಕಳವಾಸೆ, ಕೊಂಕಳಮನೆ, ಸಿದ್ದಾಪುರ ಗ್ರಾಮದ ನೂರಾರು ಗ್ರಾಮಸ್ಥರು ಈ ಪಂಜಿನ ಬರವಣಿಗೆಯಲ್ಲಿ ಭಾಗಿಯಾಗಿ ಕೂಡಲೇ ಕಸ್ತೂರಿರಂಗನ್ ವರದಿ ರದ್ದುಗೊಳಿಸಬೇಕು ಎಂದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.