ಚಿಕ್ಕಮಗಳೂರು: ಜಿಲ್ಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ವತಿಯಿಂದ ನಡೆಯುತ್ತಿರುವ ದತ್ತ ಜಯಂತಿ ಹಿನ್ನಲೆ, ಜಿಲ್ಲೆಯ ಕೆಲವು ಪ್ರವಾಸಿ ತಾಣಗಳಿಗೆ ಐದು ದಿವಸ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದೆ.
ಡಿ. 27ರಿಂದ 29ರವರೆಗೆ ಜಿಲ್ಲೆಯಲ್ಲಿ ದತ್ತ ಜಯಂತಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣಗಳಾಗಿರುವ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯದಾರ, ಹೊನ್ನಮ್ಮನ ಹಳ್ಳ ಹಾಗೂ ದತ್ತಪೀಠ ಪ್ರದೇಶಗಳಿಗೆ ಬರುವಂತಹ ಪ್ರವಾಸಿಗರಿಗೆ ಡಿಸೆಂಬರ್ 25ರಿಂದ ಡಿ.30ರ ಸಂಜೆ 6ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಇದನ್ನು ಹೊರತುಪಡಿಸಿ ಜಿಲ್ಲೆಯ ಯಾವುದೇ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧವಿಲ್ಲ.
ಈಗಾಗಲೇ ಜಿಲ್ಲೆಯ ಹೊಸ ವರ್ಷದ ಆಚರಣೆಗೆ ಹೋಟೆಲ್ ಹೋಂ ಸ್ಟೇ ಮತ್ತು ರೆಸಾರ್ಟ್ಗಳಲ್ಲಿ ಈಗಾಗಲೇ ಪ್ರವಾಸಿಗರು ರೂಂ ಬುಕ್ ಮಾಡಿದ್ದಲ್ಲಿ, ಅವುಗಳಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಕುಮಾರ್ ಹೇಳಿದ್ದಾರೆ.