ETV Bharat / state

ಚಿಕ್ಕಮಗಳೂರು: ಹನ್ನೆರಡು ಅಡಿ ಉದ್ದದ ಕಾಳಿಂಗ ಸರ್ಪ ಸೆರೆ - ಕಾಳಿಂಗ ಸರ್ಪ ಸೆರೆ

ಎರಡರಿಂದ ಮೂರು ಬಾರಿ ಉರಗ ತಜ್ಞ ಆರಿಫ್ ಮೇಲೆ ದಾಳಿ ಮಾಡುವ ಪ್ರಯತ್ನ ನಡೆಸಿದೆ. ಕೊನೆಗೂ ಪಟ್ಟು ಬಿಡದ ಆರಿಫ್ ಸತತ ಒಂದು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ, ಸರ್ಪವನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಅರಣ್ಯ ಇಲಾಖೆ ಸಿಬ್ಬಂದಿ ಸಮ್ಮುಖದಲ್ಲಿ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಸುರಕ್ಷಿತವಾಗಿ ಬಿಡಲಾಗಿದೆ.

ಸರ್ಪ ಸೆರೆ
ಸರ್ಪ ಸೆರೆ
author img

By

Published : Jun 24, 2021, 11:01 PM IST

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಾಳಿಂಗ ಸರ್ಪ ಮತ್ತು ಇತರೆ ಹಾವುಗಳು ಕಾಣಿಸಿಕೊಳ್ಳುವುದು ಸರ್ವೇ ಸಾಮಾನ್ಯ. ಇಂದು ಕೂಡ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಜಿಲ್ಲೆಯ ಮೂಡಿಗೆರೆ ತಾಲೂಕಿನ ಲೋಕವಳ್ಳಿ ಗ್ರಾಮದಲ್ಲಿ ಕಾಣಿಸಿಕೊಂಡಿದ್ದು, ಅದನ್ನು ಸೆರೆ ಹಿಡಿಯುವಲ್ಲಿ ಉರಗ ತಜ್ಞ ಆರಿಫ್ ಯಶಸ್ವಿಯಾಗಿದ್ದಾರೆ.

ಗ್ರಾಮದ ಮೋಹನ್ ಎಂಬುವರ ಎಸ್ಟೇಟ್​ನಲ್ಲಿ ಹನ್ನೆರಡು ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ. ಇದನ್ನು ಕಂಡ ಕಾರ್ಮಿಕರು ಕೂಡಲೇ ಮಾಲೀಕರಿಗೆ ವಿಚಾರ ತಿಳಿಸಿದ್ದಾರೆ. ಮಾಲೀಕ ಈ ವಿಷಯವನ್ನು ಬಣಕಲ್ ಉರಗ ತಜ್ಞ ಆರಿಫ್​ಗೆ ಹೇಳಿದ್ದು, ಕೂಡಲೇ ಕಾಫಿ ತೋಟಕ್ಕೆ ಆಗಮಿಸಿದ ಆರಿಫ್ ಸರ್ಪ ಹುಡುಕಾಟದಲ್ಲಿ ತೊಡಗಿದ್ದಾರೆ. ಬಳಿಕ ಕಾಳಿಂಗ ಸರ್ಪ ಕೆರೆ ಹಾವನ್ನು ನುಂಗಿ ಜೀರ್ಣಿಸಿಕೊಳ್ಳುತ್ತಿದ್ದ ವೇಳೆ ಕಾಣಿಸಿಕೊಂಡಿದ್ದು, ಸೆರೆಹಿಡಿಯಲು ಮುಂದಾಗಿದ್ದಾರೆ.

ಹನ್ನೆರಡು ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

ಈ ವೇಳೆ ಸರ್ಪ ಎರಡರಿಂದ ಮೂರು ಬಾರಿ ಆರಿಫ್ ಮೇಲೆ ದಾಳಿ ಮಾಡುವ ಪ್ರಯತ್ನ ನಡೆಸಿದೆ. ಕೊನೆಗೂ ಪಟ್ಟು ಬಿಡದ ಆರಿಫ್ ಸತತ ಒಂದು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ, ಸರ್ಪವನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಅರಣ್ಯ ಇಲಾಖೆ ಸಿಬ್ಬಂದಿ ಸಮ್ಮುಖದಲ್ಲಿ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಸುರಕ್ಷಿತವಾಗಿ ಬಿಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.