ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ನಡುವೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಇದೇ ರೀತಿ ಸೋಂಕು ಹೆಚ್ಚಾದರೆ ಮುಂದೆ ಏನಪ್ಪ ಗತಿ ಎಂದು ಜನತೆ ಯೋಚನೆ ಮಾಡುವಂತಾಗಿದೆ. ಕಚೇರಿಯಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ನಗರದ ಹೊರ ವಲಯದ ಕಲ್ಯಾಣ ನಗರದ ಬಳಿಯ ಬೈಪಾಸ್ ರಸ್ತೆಯಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.
ಕಚೇರಿಯ ಮುಖ್ಯ ದ್ವಾರ ಹಾಗೂ ಕಚೇರಿಯ ಬಾಗಿಲಿಗೆ ಬೀಗ ಜಡಿಯಲಾಗಿದೆ. ಸಾರ್ವಜನಿಕರು ಈ ಭಾಗದಲ್ಲಿ ಸಂಚರಿಸಬಾದು ಎಂಬ ಸೂಚನೆ ನೀಡಲಾಗಿದೆ.