ETV Bharat / state

ಅನಗತ್ಯವಾಗಿ ರಸ್ತೆಗಿಳಿದ ವಾಹನ ಸವಾರರಿಗೆ ಬಿಸಿ ಮುಟ್ಟಿಸಿದ ಚಿಕ್ಕಮಗಳೂರು ಎಸ್​ಪಿ - Akshay covid work news

ಇಂದು ಖುದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ರಸ್ತೆಗಿಳಿದಿದ್ದು, ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.

chikkamaglore District Police Superintendent
ಚಿಕ್ಕಮಗಳೂರು ಎಸ್​ಪಿ
author img

By

Published : May 18, 2021, 5:18 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ಆಗುತ್ತಿರುವ ಹಿನ್ನೆಲೆ, ಇಂದಿನಿಂದ ಜಿಲ್ಲಾ ಪೊಲೀಸ್ ಇಲಾಖೆ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಜರುಗಿಸಲು ಮುಂದಾಗಿದೆ.

ರಸ್ತೆಗಿಳಿದ ಚಿಕ್ಕಮಗಳೂರು ಎಸ್​ಪಿ

ಓದಿ: ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಒಂದೇ ಗ್ರಾಮದ 128 ಜನರಿಗೆ ಕೊರೊನಾ

ಅನಗತ್ಯವಾಗಿ ರಸ್ತೆಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಬಿಸಿ ಮುಟ್ಟಿಸುತ್ತಿದ್ದು, ಅವರ ವಾಹನಗಳನ್ನು ಜಪ್ತಿ ಮಾಡುತ್ತಿದೆ. ಇಂದು ಖುದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ರಸ್ತೆಗಿಳಿದಿದ್ದು, ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಬಿಸಿ ಮುಟ್ಟಿಸಿದ್ದಾರೆ.

ಇದೇ ಸಂದರ್ಭದಲ್ಲಿ ಕೆಲವರಿಗೆ ಮಾಸ್ಕ್​ ವಿತರಿಸಿ ಕೊರೊನಾ ಜಾಗೃತಿಯನ್ನು ಮೂಡಿಸಿದರು. ಅನಗತ್ಯವಾಗಿ ಪೊಲೀಸರ ಜೊತೆ ವಾಗ್ವಾದ ನಡೆಸುವ ವಾಹನ ಸವಾರರಿಗೆ ದಂಡ ವಿಧಿಸಿ ಅವರ ವಾಹನವನ್ನು ಸೀಜ್​ ಮಾಡುವುದರ ಮೂಲಕ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತಿದೆ ಎಂದು ಎಸ್​ಪಿ ಎಚ್ಚರಿಕೆ ನೀಡಿದರು.

ಪ್ರತಿನಿತ್ಯ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದಕ್ಕೆ ಕಡಿವಾಣ ಹಾಕಲೇಬೇಕು ಎಂಬ ನಿಟ್ಟಿನಲ್ಲಿ ಇನ್ನಷ್ಟು ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.