ETV Bharat / state

ಮನೆಗಳಿಗೆ ಕನ್ನ ಹಾಕುತ್ತಿದ್ದ ಆರೋಪಿ ಅಂದರ್: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ​

ಯಾರೂ ಇಲ್ಲದ ಮನೆಗಳಿಗೆ ನುಗ್ಗಿ ಚಿನ್ನಾಭರಣ ದೋಚುತ್ತಿದ್ದ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು 3,39,800 ರೂ. ಮೌಲ್ಯದ ಚಿನ್ನಭಾರಣ ವಶಪಡಿಸಿಕೊಂಡಿದ್ದಾರೆ.

kadur-cops-catch-the-thief
kadur-cops-catch-the-thief
author img

By

Published : Jan 30, 2020, 4:23 PM IST

ಚಿಕ್ಕಮಗಳೂರು: ಮನೆಯಲ್ಲಿ ಯಾರು ಇಲ್ಲದ ವೇಳೆ ಬೀಗ ಮುರಿದು ಚಿನ್ನಾಭರಣ ದೋಚುತ್ತಿದ್ದ ಆರೋಪಿಯನ್ನು ಜಿಲ್ಲೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಡೂರು ತಾಲೂಕಿನ ಅಪ್ರೋಜ್ ಬಂಧಿತ ಆರೋಪಿ. ಈತ ಕಡೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಮನೆಗಳಿಗೆ ಕನ್ನ ಹಾಕೋದನ್ನೇ ಕಾಯಕ ಮಾಡಿಕೊಂಡಿದ್ದ. ಈ ಕುರಿತು ಕಡೂರು ಪೊಲೀಸರು ಒಂದು ತಂಡ ರಚಿಸಿ ಕಳ್ಳನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಸುಮಾರು 3,39,800 ರೂ. ಮೌಲ್ಯದ ಚಿನ್ನಭಾರಣ, ಕೃತ್ಯಕ್ಕೆ ಬಳಸುತ್ತಿದ್ದ ಒಂದು ಬೈಕ್ ವಶಕ್ಕೆ ಪಡೆದಿದ್ದಾರೆ.

ಆರೋಪಿಯ ವಿರುದ್ಧ ಬೀರೂರು, ಕಡೂರು, ತರೀಕೆರೆ, ಸಖರಾಯಪಟ್ಟಣ ಹಾಗೂ ಭದ್ರಾವತಿ, ಅರಸೀಕೆರೆ, ಶಿವಮೊಗ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಕೆಲ ಪ್ರಕರಣಗಳು ನ್ಯಾಯಲಯದಲ್ಲಿ ವಿಚಾರಣೆ ಹಂತದಲ್ಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.