ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಸಮೀಪದ ಗುಲ್ಲನ ಪೇಟೆಯ ಸತ್ತಿಹಳ್ಳಿ ನಿರ್ಜನ ಪ್ರದೇಶದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತ ಜೋಡಿ ಚಿಕ್ಕಮಗಳೂರು ತಾಲೂಕಿನ, ಕಲ್ಲುಗುಡ್ಡೆ ಅಣೂರಿನ ದರ್ಶನ್ ಮತ್ತು ಹಾಸನ ಜಿಲ್ಲೆಯ ಹಾನಬಾಳು ಮೂಲದ ಪೂರ್ವಿಕಾ ಎಂದು ಗುರುತಿಸಲಾಗಿದೆ.
ಈ ಇಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರೇಮಿಗಳ ಮೃತ ದೇಹವನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.
ಇದನ್ನೂ ಓದಿ: ಪತ್ನಿಯೊಂದಿಗೆ ಸೇರಿಕೊಂಡು ಮಂತ್ರವಾದಿ ಅಪ್ಪನನ್ನು ಕೊಂದ ಮಗ