ETV Bharat / state

ಚಿಕ್ಕಮಗಳೂರಿನಲ್ಲಿ 2 ಶತಕದತ್ತ ಕೊರೊನಾ ಸೋಂಕಿತರ ಸಂಖ್ಯೆ - ಕೋವಿಡ್-19 ಆಸ್ಪತ್ರೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 198ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 68 ಸಕ್ರಿಯ ಪ್ರಕರಣಗಳಿವೆ. ಒಟ್ಟು 123 ಜನ ಸೋಂಕಿತರು ಜಿಲ್ಲಾ ಕೋವೀಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ckm
ckm
author img

By

Published : Jul 17, 2020, 3:00 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮತ್ತೆ 30 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 198ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಇಂದು 22 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 123 ಜನ ಸೋಂಕಿತರು ಜಿಲ್ಲಾ ಕೋವೀಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಚಿಕ್ಕಮಗಳೂರಿನಲ್ಲಿ ಕೊರೊನಾ: ಪ್ರತ್ಯಕ್ಷ ವರದಿ

ಚಿಕ್ಕಮಗಳೂರು ತಾಲೂಕಿನಲ್ಲಿ 14, ಮೂಡಿಗೆರೆ ತಾಲೂಕಿನಲ್ಲಿ 2, ತರೀಕೆರೆ ತಾಲೂಕಿನಲ್ಲಿ 03, ಕೊಪ್ಪ ತಾಲೂಕಿನಲ್ಲಿ 03, ಕಡೂರು ತಾಲೂಕಿನಲ್ಲಿ 07, ಅಜ್ಜಂಪುರದಲ್ಲಿ 01 ಪ್ರಕರಣ ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಈವರೆಗೂ 7ಕ್ಕೆ ಏರಿಕೆಯಾಗಿದ್ದು, ಸೋಂಕಿತರು ವಾಸ ಮಾಡುತ್ತಿದ್ದ ಏರಿಯಾಗಳನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 198ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 68 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.