ಚಿಕ್ಕಮಗಳೂರು : ಜಿಲ್ಲೆಯಲ್ಲಿ ಇಂದು 43 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ, 12,105ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 78 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 11,213 ಜನ ಸೋಂಕಿತರು ಜಿಲ್ಲಾ ಕೋವೀಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾದಂತೆ ಆಗಿದೆ.
ಚಿಕ್ಕಮಗಳೂರು 17, ಕಡೂರು 10, ಮೂಡಿಗೆರೆ 6, ತರೀಕೆರೆ 7, ಶೃಂಗೇರಿ1, ಕೊಪ್ಪ 2 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.
ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 136ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12,105ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 678 ಸಕ್ರಿಯ ಪ್ರಕರಣಗಳಿವೆ.