ETV Bharat / state

ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ನಿಗಾವಹಿಸುವಂತೆ ಜಿಲ್ಲಾಡಳಿತಕ್ಕೆ ಮಕ್ಕಳ ಆಯೋಗ ಸೂಚನೆ - ಕೊರೊನಾ ನಿಯಂತ್ರಣ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತು ಡಿಸಿ ಸಭೆ

ಜಿಲ್ಲೆಯಲ್ಲಿ ಮಕ್ಕಳಲ್ಲಿ ಕೊರೊನಾ ಸೋಂಕು ಹರಡದಂತೆ ಜಿಲ್ಲಾಡಳಿತ ಯಾವೆಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂಬುದರ ಕುರಿತು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸಭೆ ನಡೆಸಿತು.

Meeting
Meeting
author img

By

Published : Oct 18, 2020, 3:29 PM IST

ಚಿಕ್ಕಮಗಳೂರು : ಕೊರೊನಾ ಈ ಸಮಯದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ನಿಗಾವಹಿಸುವಂತೆ ಜಿಲ್ಲಾಡಳಿತಕ್ಕೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ಆರ್.ಜಿ. ಆನಂದ್ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ 18 ವರ್ಷದೊಳಗಿನ ಮಕ್ಕಳಲ್ಲಿ ಕೊರೊನಾ ಸೋಂಕು ಹಡದಂತೆ ಜಿಲ್ಲೆಯಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಭೆ ನಡೆಸಿದರು.

ಮಕ್ಕಳಲ್ಲಿ ಸೋಂಕು ಕಾಣಿಸಿಕೊಳ್ಳದಂತೆ ಜಿಲ್ಲೆಯಲ್ಲಿ ಯಾವೆಲ್ಲ ಕ್ರಮಗಳನ್ನು ಕೈಗೊಂಡಿದ್ದಾರೆ ಎಂಬುವರ ಕುರಿತು ಮಾಹಿತಿ ಪಡೆದ ಅವರು, ಅಂಗನವಾಡಿಗಳು ಮಕ್ಕಳಿಗೆ ಪೌಷ್ಠಿಕ ಸಮತೋಲನ ಆಹಾರ ಸಿಗುವಂತೆ ನೋಡಿಕೊಳ್ಳಬೇಕು ಹಾಗೂ ಮಾತೃ ಪೂರ್ಣ ಯೋಜನೆಯಡಿ ಗರ್ಭಿಣಿ ಬಾಣಂತಿಯರಿಗೆ ಆಹಾರ ಸರಬರಾಜು ನಿಯಮಿತವಾಗಿ ವಿತರಣೆಯಾಗುವಂತೆ ಕ್ರಮ ವಹಿಸಿಬೇಕು ಎಂದರು.

ಜಿಲ್ಲೆಯಲ್ಲಿ 18 ವರ್ಷದೊಳಗಿನ ಒಟ್ಟು 1,54,006 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಕೊರೊನಾ ಇರುವ ಹಿನ್ನೆಲೆಯಲ್ಲಿ ವಿದ್ಯಾಗಮ ಯೋಜನೆಯಡಿಯಲ್ಲಿ ಹಾಗೂ ಆನ್‌ಲೈನ್ ಮೂಲಕ ಸಾಕಷ್ಟು ಮಕ್ಕಳಿಗೆ ಶಿಕ್ಷಣ ಸೇವೆ ಒದಗಿಸಲಾಗುತ್ತಿದೆ. ವಿದ್ಯಾಗಮ ಯೋಜನೆ ಪ್ರಾರಂಭದಿಂದ ಈವರೆಗೆ ಜಿಲ್ಲೆಯಲ್ಲಿ 16 ಮಕ್ಕಳಿಗೆ ಮಾತ್ರ ಕೊರೊನಾ ಸೋಂಕು ದೃಢಪಟ್ಟಿದೆ. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಮಕ್ಕಳು ಗುಣಮುಖರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ನಗರದ ಆಶಾಕಿರಣ ಮತ್ತು ಕಡೂರು ಪಟ್ಟಣದಲ್ಲಿ ನಿವೇದಿತಾ ಎಂಬ ಅಂಧ ಮಕ್ಕಳ ಪೋಷಣಾ ಕೇಂದ್ರಗಳಿದ್ದು, ಈ ಎರಡು ಕೇಂದ್ರಗಳಲ್ಲಿ 200 ಕ್ಕೂ ಹೆಚ್ಚು ಮಕ್ಕಳನ್ನು ಪೋಷಣೆ ಮಾಡಲಾಗುತ್ತಿದೆ. ಕೊರೊನಾ ಕಾರಣದಿಂದಾಗಿ ಮಕ್ಕಳನ್ನು ಪೋಷಕರ ಆಶ್ರಯಕ್ಕೆ ನೀಡಲಾಗಿದೆ. ಈ ಕೇಂದ್ರಗಳ ನಿರ್ವಹಣೆಗೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅನುದಾನ ನೀಡಲಾಗುತ್ತಿರುವ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಮಾಹಿತಿ ಪಡೆದರು.

ಕೊರೊನಾ ಸೋಂಕು ತಡೆಗೆ ಜಿಲ್ಲಾಡಳಿತ ಈಗಾಗಲೇ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಜನತೆಯಲ್ಲಿ ಹೆಚ್ಚು ಜಾಗೃತಿ ಮೂಡಿಸಿ ಇದರ ನಿಯಂತ್ರಣಕ್ಕಾಗಿ ಜಿಲ್ಲಾಡಳಿತದೊಂದಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.