ಚಿಕ್ಕಮಗಳೂರು: ಬಡವರು, ಕಾರ್ಮಿಕರು, ನಿರ್ಗತಿಕರು ಹಾಗೂ ಭಿಕ್ಷುಕರಿಗೆ ನಗರದ ವಿವಿಧ ಭಾಗದಲ್ಲಿರುವ ನಿರಾಶ್ರಿತ ಕೇಂದ್ರಗಳಲ್ಲಿ ಜಿಲ್ಲಾಡಳಿತ ಆಶ್ರಯ ಕಲ್ಪಿಸಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಿ ಒದಗಿಸಲಾಗಿರುವ ಸೌಕರ್ಯಗಳ ತಪಾಸಣೆ ನಡೆಸಿದ್ರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಬಸವರಾಜ್ ಚೇಂಗಟಿ, ನಗರದಲ್ಲಿರುವ ಮೂರು ನಿರಾಶ್ರಿತ ಕೇಂದ್ರಗಳಿಗೆ ಭೇಟಿ ನೀಡಿದರು. ಈ ವೇಳೆ ಅವರು ಜಿಲ್ಲಾಡಳಿತದ ವತಿಯಿಂದ ನೀಡಲಾಗಿರುವ ಸೌಲಭ್ಯ ಮತ್ತು ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು. ಅಧಿಕಾರಿಗಳಿಂದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಇದಾದ ಬಳಿಕ ನಗರದ ಹೊರವಲಯದ ಹಿರೇಮಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ಕೊಟ್ಟು ಸುರಕ್ಷತಾ ಕ್ರಮಗಳನ್ನು ಪರಿಶೀಲನೆ ನಡೆಸಿದರು.