ಚಿಕ್ಕಮಗಳೂರು: ಅನಧಿಕೃತ ಅಂಗಡಿ ತೆರವಿಗೆ ಮುಂದಾದಾಗ ಅಂಗಡಿ ಮಾಲೀಕ ಮತ್ತು ಪೌರ ಕಾರ್ಮಿಕರ ನಡುವೆ ತಳ್ಳಾಟ - ನೂಕಾಟ ನಡೆದಿರುವ ಘಟನೆ ನಡೆದಿದೆ.
ಜಿಲ್ಲೆಯ ಕೊಪ್ಪ ತಾಲೂಕಿನ ನಗರದಲ್ಲಿ ಬೀದಿ ಬದಿ ವ್ಯಾಪಾರ ಮಾಡುವ ಕೆಲವರ ವಿರುದ್ಧ ಈ ಹಿಂದೆ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಾರ್ವಜನಿಕ ದೂರು ಬಂದಿತ್ತು. ಹಾಗಾಗಿ ಸಭೆಯಲ್ಲಿ ಅನಧಿಕೃತ ಅಂಗಡಿಗೆ ತೆರವಿಗೆ 15 ದಿನಗಳ ಗಡುವು ನೀಡಲಾಗಿತ್ತು. ಈ ಹಿನ್ನೆಲೆ ಪಟ್ಟಣ ಪಂಚಾಯತ್ ಸಿಬ್ಬಂದಿ ಅನಧಿಕೃತ ಅಂಗಡಿ ತೆರವಿಗೆ ಮುಂದಾದಾಗ ಅಂಗಡಿ ಮಾಲೀಕ ಮತ್ತು ಪೌರ ಕಾರ್ಮಿಕರ ನಡುವೆ ಜಗಳ ನಡೆದಿದೆ.
ಹಠಕ್ಕೆ ಬಿದ್ದಂತೆ ಪಟ್ಟಣ ಪಂಚಾಯಿತಿ ಸಿಬ್ಬಂದಿ ಅನಧಿಕೃತ ಬೀದಿ ವ್ಯಾಪಾರಿಗಳನ್ನು ಖಾಲಿ ಮಾಡಿಸಲು ಮುಂದಾಗಿದ್ರು. ಈ ವೇಳೆ, ಪಟ್ಟಣ ಪಂಚಾಯಿತಿ ಸಿಬ್ಬಂದಿ ಹಾಗೂ ಬೀದಿ ಬದಿ ವ್ಯಾಪಾರಿಗಳ ನಡುವೆ ಮಾತಿನ ಚಕಮಕಿ ನಡೆದು, ಇಬ್ಬರೂ ಕೈ ಕೈ ಮಿಲಾಯಿಸುವ ಹಂತಕ್ಕೂ ಹೋಗಿದೆ. ಈ ವೇಳೆ ಕೊಪ್ಪ ಪೊಲೀಸರು ಮಧ್ಯಪ್ರವೇಶಿಸಿ ಗಲಾಟೆಯನ್ನು ತಣ್ಣಗಾಗಿಸಿದ್ದಾರೆ.
ಇದನ್ನೂ ಓದಿ:ಒಂದು ವಿಚಾರವಾಗಿ ನನ್ನ ತಂದೆ, ಅಜ್ಜಿ ಹತ್ಯೆಯಾದ ಬಗ್ಗೆ ನನಗೆ ಹೆಮ್ಮೆಯಿದೆ: ರಾಗಾ ಸಮರ್ಥನೆ