ಚಿಕ್ಕಮಗಳೂರು: ಸಿದ್ದರಾಮಯ್ಯ ಅವರು ತಮಗೆ ಆರೋಗ್ಯ ಸರಿ ಇಲ್ಲ. ಬಿಪಿ ಶುಗರ್ ಇದೆ, ಬಹಳ ದಿನ ಬದುಕಿರ್ತೀನೋ ಇಲ್ವೋ ಗೊತ್ತಿಲ್ಲ. ತಾವು ಸಿಎಂ ಆಗಬೇಕಾದರೆ ನೀವು ಮತ ಹಾಕಲೇಬೇಕು ಎಂದು ಭಾವನಾತ್ಮಕವಾಗಿ ಮತ ಕೇಳುತ್ತಿದ್ದಾರೆ. ಅವರಿಗೆ ಏನು ಆಗುವುದು ಬೇಡ, ಅವರು ನೂರು ಕಾಲ ಬದುಕಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಜನಸಂಕಲ್ಪ ಯಾತ್ರೆ ಹಿನ್ನೆಲೆ ಕಡೂರಿಗೆ ಆಗಮಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ ಮಾಧ್ಯಮದವರೊಂದಿಗೆ ಮಾತನಾಡಿ, 2013 ರಲ್ಲೂ ಸಿದ್ದರಾಮಯ್ಯ ಅವರು ಇದೇ ರೀತಿ ಹೇಳಿದ್ದರು. ಆಗ ಜನ ಅವರನ್ನು ನಂಬಿ ಮತ ಹಾಕಿದ್ದರು. ಆದರೆ ಸಿದ್ದರಾಮಯ್ಯ ಜನರ ಮತಗಳಿಗೆ ಬೆಲೆ ನೀಡಿಲ್ಲ. ಸಿದ್ದರಾಮಯ್ಯ ಅವರ ಆಡಳಿತ ಕಾಲದಲ್ಲಿ ಕೊಲೆ, ಸುಲಿಗೆ ಜಾಸ್ತಿ ಇತ್ತು. ಈಗ ಜನ ಅವರನ್ನು ನಂಬದೆ ವಿರೋಧ ಪಕ್ಷದಲ್ಲಿ ಕೂರಿಸಿದ್ದಾರೆ. ಈಗ ಮತ್ತೆ ಅವರನ್ನು ನಂಬುವ ಸ್ಥಿತಿಯಲ್ಲಿ ಜನ ಇಲ್ಲ. ಕನ್ನಡಿಗರು ಇಂತಹ ಮಾತಿಗೆ ಬೆಲೆ ನೀಡಲ್ಲ. ಕನ್ಮಡಿಗರು ವಿಶ್ಲೇಷಣೆ ಮಾಡಿ ಮತ ಹಾಕುತ್ತಾರೆ ಎಂದು ಹೇಳಿದರು.
ಅಂಗಡಿಗಳು ಬಂದ್: ಬಸವರಾಜ ಬೊಮ್ಮಾಯಿ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರಿಗೆ ಆಮಿಸುವ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಯ ಅಂಗಡಿಗಳನ್ನು ಪೊಲೀಸರು0 ಬಂದ್ ಮಾಡಿಸಿದ್ದರು. ಹೆಲಿಪ್ಯಾಡ್ನಿಂದ ಎಪಿಎಂಸಿವರೆಗಿನ ಅಂಗಡಿಗಳನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಪೊಲೀಸರ ನಡೆಗೆ ಅಂಗಡಿ ಮಾಲೀಕರ ಅಸಮಾಧಾನ ವ್ಯಕ್ತಪಡಿಸಿದ್ದು, ಸಿಎಂ ತೆರಳಿದ ಬಳಿಕ ಓಪನ್ ಮಾಡುವಂತೆ ಸೂಚನೆ ನೀಡಲಾಗಿತ್ತು.
ಇದನ್ನೂ ಓದಿ: ಜನ ಸಂಕಲ್ಪ ಯಾತ್ರೆಗೆ ಸಕಲ ಸಿದ್ಧತೆ: ಶಾಸಕ ಕುಮಾರ್ ಬಂಗಾರಪ್ಪ