ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಸಾಂಸ್ಕೃತಿಕ ವೈಭವದ ಜೊತೆಗೆ, ಧಾರ್ಮಿಕ ಹಾಗೂ ನೈಸರ್ಗಿಕ ಸೊಬಗಿನಿಂದ ಸುಂದರ ತಾಣವಾಗಿ ಜನರನ್ನು ಆಕರ್ಷಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.
ಚಿಕ್ಕಮಗಳೂರಿನಲ್ಲಿ ಅಟಲ್ ಬಿಹಾರಿ ವಾಜಪೇಯಿ ಬಡಾವಣೆ ಉದ್ಘಾಟನೆ, ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಶಂಕುಸ್ಥಾಪನೆ ಸೇರಿದಂತೆ 1.63 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೇರವೇರಿಸಿ ಅವರು ಮಾತನಾಡಿದರು.
ಓದಿ : ಕರಾವಳಿಯಲ್ಲಿ ಅರೆಬರೆ ಕಾಮಗಾರಿ.. ಆದ್ರೂ ಲೋಕಾರ್ಪಣೆಗೊಂಡ ಹೆದ್ದಾರಿ!
ಸಿ.ಟಿ ರವಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಆರ್ಥಿಕ ಸಂಕಷ್ಟದ ಮಧ್ಯೆಯೂ ಜಿಲ್ಲೆಗೆ ಸಾವಿರ ಕೋಟಿಯಷ್ಟು ಅನುದಾನ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಹಣಕಾಸಿನ ಪರಿಸ್ಥಿತಿಯನ್ನು ನೋಡಿಕೊಂಡು ಮತ್ತಷ್ಟು ಅಭಿವೃದ್ಧಿ ಕಾರ್ಯಗಳಿಗೆ ನೆರವು ನೀಡುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ವಸತಿ ಸಚಿವ ಸೋಮಣ್ಣ, ವೈದ್ಯಕೀಯ ಸಚಿವ ಸುಧಾಕರ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್ ಜೀವರಾಜ್ ಉಪಸ್ಥಿತರಿದ್ದರು.