ಚಿಕ್ಕಮಗಳೂರು: ಬಾಳೆಹೊನ್ನೂರು ಬಳಿಯ ಜೇನುಗದ್ದೆ ಬಳಿ ಮುಖ್ಯಮಂತ್ರಿ ಬೆಂಗಾವಲು ವಾಹನ ಬ್ರೇಕ್ ಜಾಮ್ ಆಗಿ ಪಲ್ಟಿಯಾಗಿದೆ.
ಮಂಗಳೂರಿನಿಂದ ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ಪೊಲೀಸ್ ಜೀಪ್ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಗಂಭೀರ ಗಾಯವಾಗಿದೆ. ಜೀಪ್ ಚಾಲಕ ಶರತ್ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.