ಚಿಕ್ಕಮಗಳೂರು: ಮಹಾಮಾರಿ ಕೊರೊನಾಗೆ ಇಂದಿನಿಂದ ಜಿಲ್ಲೆಯಲ್ಲಿ ಲಸಿಕೆ ಹಾಕುತ್ತಿದ್ದು, ಜಿಲ್ಲೆಯ 9 ಲಸಿಕೆ ಕೇಂದ್ರಗಳಲ್ಲಿ ಬೆಳಗ್ಗೆ 11.30 ರಿಂದ ಸಂಜೆ 6 ಗಂಟೆವರೆಗೆ ಒಟ್ಟು 574 ಜನರಿಗೆ ಲಸಿಕೆ ನೀಡಲಾಗಿದೆ.
ಆರೋಗ್ಯ ಇಲಾಖೆಯು 850 ಜನರಿಗೆ ಲಸಿಕೆ ನೀಡುವ ಗುರಿಯನ್ನು ಇಟ್ಟುಕೊಂಡಿತ್ತು. ಈ ಪೈಕಿ 574 ಜನರಿಗೆ ಲಸಿಕೆ ನೀಡಲಾಗಿದೆ. ಈ ಮೂಲಕ ಶೇ 64.71 ರಷ್ಟು ಆರೋಗ್ಯ ಸಿಬ್ಬಂದಿ ಲಸಿಕೆಯನ್ನು ಪಡೆದುಕೊಂಡಿದ್ದಾರೆ.
ಲಸಿಕೆ ಪಡೆದ ಆರೋಗ್ಯ ಸಿಬ್ಬಂದಿಗೆ ಯಾವುದೇ ಸೈಡ್ ಎಫೆಕ್ಟ್ ಕಾಣಿಸಿಕೊಂಡಿಲ್ಲ. ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ 75 ಆರೋಗ್ಯ ಸಿಬ್ಬಂದಿಗೆ, ಹೋಲಿಕ್ರಾಸ್ ಆಸ್ಪತ್ರೆಯಲ್ಲಿ 84, ಕಡೂರು ತಾಲೂಕು ಆಸ್ಪತ್ರೆಯಲ್ಲಿ 57, ತರೀಕೆರೆ ತಾಲೂಕು ಆಸ್ಪತ್ರೆಯಲ್ಲಿ 50, ಎನ್.ಆರ್.ಪುರ. ತಾಲೂಕು ಆಸ್ಪತ್ರೆಯಲ್ಲಿ 79, ಮೂಡಿಗೆರೆ ತಾಲೂಕು ಆಸ್ಪತ್ರೆಯಲ್ಲಿ 50, ಶೃಂಗೇರಿ ತಾಲೂಕು ಆಸ್ಪತ್ರೆಯಲ್ಲಿ 69, ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ 73, ಹುಲಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಒಟ್ಟು 37 ಆರೋಗ್ಯ ಸಿಬ್ಬಂದಿ ಲಸಿಕೆಯನ್ನು ಪಡೆದುಕೊಂಡಿದ್ದಾರೆ.