ಚಿಕ್ಕಮಗಳೂರು: ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಎರಡೂ ಬೈಕ್ಗಳು ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಜಿಲ್ಲೆಯ ಕಡೂರು ತಾಲೂಕಿನ ಗೆದ್ದಲ ಹಳ್ಳಿ ಬಳಿ ಈ ಘಟನೆ ನಡೆದಿದ್ದು, ಯುನಿಕಾರ್ನ್ ಬೈಕ್ನಲ್ಲಿದ್ದ ಮಂಜುನಾಥ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಹಾಸನದ ಕಡೆ ಹೋಗುತ್ತಿದ್ದ ಮಂಜುನಾಥ್ ಬೈಕ್, ಹಾಸನದಿಂದ ಶಿವಮೊಗ್ಗ ಮಾರ್ಗವಾಗಿ ಬರುತ್ತಿದ್ದ ಪಲ್ಸರ್ ಬೈಕ್ಗೆ ಡಿಕ್ಕಿ ಹೊಡೆದಿದೆ.
ಬೈಕ್ನಲ್ಲಿದ್ದ ಸಂಜಯ್ ಹಾಗೂ ಗೌತಮ್ಗೆ ಗಂಭೀರ ಗಾಯಗಳಾಗಿವೆ. ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.