ಚಿಕ್ಕಮಗಳೂರು: ಲೋಕಸಭಾ ಚುನಾವಣಾ ಪ್ರಚಾರ ಭಾಷಣದಲ್ಲಿ ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿ ಟಿ ರವಿ ಅವರು ಮತದಾರರಿಗೆ ಅವಹೇಳನಕಾರಿ ಪದಗಳನ್ನು ಬಳಸಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರು ಪ್ರತ್ಯೇಕವಾಗಿ ಜಿಲ್ಲಾ ಚುನಾವಣಾ ಅಧಿಕಾರಿಗಳನ್ನು ಭೇಟಿಯಾಗಿ ಅವರ ವಿರುದ್ಧ ದೂರು ನೀಡಿದ್ದಾರೆ.

ಮತದಾರರಿಗೆ ಅವರದ್ದೇ ಅದಂತಹ ಸ್ವಾತಂತ್ರ್ಯವಿರುತ್ತದೆ. ಆದರೆ ಶಾಸಕ ಸಿ ಟಿ ರವಿ ತಮ್ಮ ಅಭ್ಯರ್ಥಿಯ ಪರ ಮತಯಾಚಿಸುವ ಸಂದರ್ಭದಲ್ಲಿ ಪ್ರಚೋದನಕಾರಿಯಾಗಿ ಬಿಜೆಪಿಗೆ ಮತ ನೀಡದವರು ತಾಯಿಗಂಡರು ಎಂದು ನಾಲಿಗೆ ಹರಿ ಬಿಟ್ಟಿದ್ದಾರೆ. ಬಹಿರಂಗ ಸಭೆಯಲ್ಲಿ ಬಿಜೆಪಿಗೆ ಮತ ಹಾಕದವರು ದ್ರೋಹಿಗಳು ಎಂದು ಹಿಯಾಳಿಸಿದ್ದು ಇಂತಹ ಹೇಳಿಕೆಯನ್ನು ನೀಡಿ ಪರೋಕ್ಷವಾಗಿ ಬಿಜೆಪಿಗೆ ಮತ ಹಾಕುವಂತೆ ಎಚ್ಚರಿಕೆ ನೀಡಿರುವ ಜೊತೆಗೆ ಪ್ರಜಾಪ್ರಭುತ್ವದ ಮೌಲ್ಯವನ್ನು ದಮನ ಮಾಡಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಶಿಸ್ತು ಕ್ರಮ ಕೈ ಗೊಳ್ಳಬೇಕೆಂದು ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರು ಪ್ರತ್ಯೆಕವಾಗಿ ಜಿಲ್ಲಾ ಚುನಾವಣಾ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.
