ETV Bharat / state

ಕೆಎಸ್​ಆರ್​​ಟಿಸಿ ಬಸ್​ನಲ್ಲಿ ಹೃದಯಾಘಾತ : ಕಂಡಕ್ಟರ್ ಸಾವು - ಚಿಕ್ಕಮಗಳೂರು ಕಂಡಕ್ಟರ್ ಸಾವು

ನಿರ್ವಾಹಕರೊಬ್ಬರು ಬಸ್‌ನಲ್ಲಿಯೇ ಹೃದಯಾಘಾತದಿಂದ ಸಾವಿಗೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ..

ksrtc
ksrtc
author img

By

Published : Dec 25, 2021, 1:04 PM IST

ಚಿಕ್ಕಮಗಳೂರು : ಸರ್ಕಾರಿ ಬಸ್​ನಲ್ಲೇ ನಿರ್ವಾಹಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ವಿಜಯ್ (43) ಮೃತ ನಿರ್ವಾಹಕ. ಇಂದು ಬೆಳಗ್ಗೆ 6.30ಕ್ಕೆ ಚಿಕ್ಕಮಗಳೂರಿನಿಂದ ಉಡುಪಿಗೆ ಹೊರಟಿದ್ದ ಸರ್ಕಾರಿ ಬಸ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ವಿಜಯ್​ಗೆ ಎದೆ ನೋವು ಕಾಣಿಸಿದೆ.

ಬಳಿಕ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್​ನ ಮಲಯ ಮಾರುತ ಬಳಿ ಎದೆ ನೋವಿನ ಕುರಿತು ನಿರ್ವಾಹಕ, ಪ್ರಯಾಣಿಕನಿಗೆ ತಿಳಿಸಿದ್ದಾರೆ.

ಮೃತ ಕಂಡಕ್ಟರ್
ಮೃತ ಕಂಡಕ್ಟರ್

ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಮೂಡಿಗೆರೆಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬೆಳಗ್ಗೆ 8.15ರ ಸುಮಾರಿಗೆ ಬಸ್​ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.