ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ದ ವಿಭಿನ್ನವಾಗಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆಯಲ್ಲಿನ ಗುಂಡಿಯಲ್ಲಿ ಯುವತಿ ಬಿದ್ದು ಸಾವಿಗೀಡಾಗಿದ್ದ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದು ಚಿಕ್ಕಮಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಳೆಗಿಡ ಹಾಗೂ ಅಡಿಕೆ ಸಸಿ ನೆಟ್ಟು ಆಕ್ರೋಶ ವ್ಯಕ್ತಪಡಿಸಿ ರಸ್ತೆಯ ಮಧ್ಯೆ ಸಚಿವ ಸಿ ಟಿ ರವಿ ಭಾವಚಿತ್ರ ಇಟ್ಟು ಅದಕ್ಕೆ ನೀರು ಬಿಟ್ಟು ಆಕ್ರೋಶ ಹೊರಹಾಕಿದ್ದಾರೆ.
ರಸ್ತೆಯ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿದ್ದ ಸಿಂಧೂಜಾ ಸಾವಿಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಪಿಬ್ಲೂಡಿ ಇಲಾಖೆ ವಿರುದ್ದವೂ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದ ದಂಟರ ಮಕ್ಕಿಯ ಬಳಿ ಪಾಸ್ ಪೋರ್ಟ್ ವೆರಿಫಿಕೇಷನ್ ಗೆ ಹೋಗುವ ವೇಳೆ ಸಿಂದೂಜಾ ರಸ್ತೆಯಲ್ಲಿ ಆಗಿರುವ ಆಳವಾದ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿದ್ದರು. ಈ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದು, ನೂರಾರು ಕಾರ್ಯಕರ್ತರು ಭಾಗವಹಿಸಿ ರಾಜ್ಯ ಸರ್ಕಾರ ಹಾಗೂ ಸಚಿವ ಸಿ ಟಿ ರವಿ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.