ಚಿಕ್ಕಮಗಳೂರು: ಶೃಂಗೇರಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಪ್ಪ ಅಮರನಾಥ ನೇತೃತ್ವದಲ್ಲಿ ಶೃಂಗೇರಿ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಆರೋಪಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
15 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಶೃಂಗೇರಿಯಲ್ಲಿ 17 ಆರೋಪಿಗಳ ವಿರುದ್ಧ ಎಫ್ಐಆರ್
ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿ ಪರಾರಿಯಾಗಿರುವ ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ನೀಡಬೇಕೆಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.