ಚಿಕ್ಕಮಗಳೂರು : ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ಜಿಲ್ಲೆಯ ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ ಭಾನುವಾರ ಭೇಟಿ ನೀಡಿದರು. ಈ ವೇಳೆ ಎಂ ಬಿ ಪಾಟೀಲ್ ಜಗದ್ಗುರು ಶಿವಾಚಾರ್ಯ ಸೋಮೇಶ್ವರ ಶ್ರೀಗಳ ಆಶೀರ್ವಾದ ಪಡೆದು, ಕೆಲಕಾಲ ಶ್ರೀಗಳೊಂದಿಗೆ ಮಾತುಕತೆ ನಡೆಸಿದರು.
ಕಳೆದ ತಿಂಗಳು ರಂಭಾಪುರಿ ಪೀಠಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಚರ್ಚೆ ನಡೆಸಿದ್ದರು. ಶ್ರೀಗಳ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಂ ಬಿ ಪಾಟೀಲ್, ನಾವು ಯಾವ ವಿಚಾರದ ಬಗ್ಗೆಯೂ ಚರ್ಚೆ ಮಾಡಿಲ್ಲ. ದಯವಿಟ್ಟು ಯಾವುದೇ ವಿವಾದ ಬೇಡ. ಸೌಹಾರ್ದಯುತವಾಗಿ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿದ್ದೇವೆ. ಸಮಾಜಕ್ಕೆ ಏನು ಬೇಕು, ಸಮಾಜದ ಉನ್ನತಿಗೆ ಏನು ಮಾಡಬೇಕು ಎನ್ನುವ ಬಗ್ಗೆ ಮಾತನಾಡಿದ್ದೇವೆ ಎಂದರು.
ಜೊತೆಗೆ ನೆರೆ, ಚಿಕ್ಕಮಗಳೂರು ಸಮಸ್ಯೆ, ಕಸ್ತೂರಿ ರಂಗನ್ ವರದಿ ಬಗ್ಗೆಯೂ ಶ್ರೀಗಳು ಮಾತನಾಡಿದರು ಎಂದು ಕಾಂಗ್ರೆಸ್ ನಾಯಕ ಎಂ ಬಿ ಪಾಟೀಲ್ ಹೇಳಿದರು.
ಇದನ್ನೂ ಓದಿ : ಸೆ 30 ರಂದು ರಾಹುಲ್ ಗಾಂಧಿ ಜೊತೆ ಆದಿವಾಸಿಗಳ ಸಂವಾದ .. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ